Breaking News

ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ: ವಾಯುವ್ಯ ಸಾರಿಗೆಯಿಂದ ಹೆಚ್ಚುವರಿ ವಿಶೇಷ ಬಸ್​​ ಸೌಲಭ್ಯ

Spread the love

ಹುಬ್ಬಳ್ಳಿ (ಧಾರವಾಡ): ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 22 ರಿಂದ 31 ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಆಗಸ್ಟ್​ 26ರಂದು ಮಂಗಳವಾರ ಗೌರಿ ಹಬ್ಬ, ನಿರ್ಬಂಧಿತ ರಜೆ, ಆ. 27 ರಂದು ಬುಧವಾರ ಗಣೇಶ ಚತುರ್ಥಿ ಸಾರ್ವಜನಿಕ ರಜೆ, ಆ. 24ರಂದು 4ನೇ ಶನಿವಾರ ವಾರಾಂತ್ಯ ದಿನ ಮತ್ತು ಆ. 25 ಹಾಗೂ ಆ. 31ರಂದು ರವಿವಾರ ರಜೆ ಇದೆ. ಉದ್ಯೋಗ, ಶಿಕ್ಷಣ, ವ್ಯಾಪಾರ ಮತ್ತಿತರ ಕೆಲಸ ಕಾರ್ಯಗಳಿಗಾಗಿ ದೂರದ ಸ್ಥಳಗಳಲ್ಲಿ ನೆಲೆಸಿರುವ ಜಿಲ್ಲೆಯ ಜನರು ಹಬ್ಬದ ಆಚರಣೆಗಾಗಿ ತಮ್ಮ ಸ್ಥಳಗಳಿಗೆ ಬಂದು ಹೋಗಲಿದ್ದಾರೆ.

ಹಬ್ಬಕ್ಕೆ ಆಗಮಿಸುವವರ ಅನುಕೂಲಕ್ಕಾಗಿ ಆಗಸ್ಟ್​ 22ರಿಂದ 26ರವರೆಗೆ ಬೆಂಗಳೂರು ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿ, ಕಲಘಟಗಿ, ನವಲಗುಂದ ಮತ್ತಿತ್ತರ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಹಬ್ಬ – ರಜೆ ಮುಗಿಸಿ ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಆ. 27ರಿಂದ 31ರವರೆಗೆ ಹುಬ್ಬಳ್ಳಿ, ಕಲಘಟಗಿ, ನವಲಗುಂದ ಮತ್ತಿತರ ಸ್ಥಳಗಳಿಂದ ಬೆಂಗಳೂರು, ಗೋವಾ, ಪುಣೆ, ಹೈದರಾಬಾದ್​, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್​ಗಳನ್ನು ಓಡಿಸಲಾಗುತ್ತದೆ.

ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್​ಗಳನ್ನು ನಿಯೋಜಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಗಡ ಬುಕಿಂಗ್​: ರಿಯಾಯಿತಿ: ಹಬ್ಬದ ವಿಶೇಷ ಬಸ್ಸುಗಳಿಗೆ https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್​ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನೇಹಾ ಹಿರೇಮಠ ಕೊಲೆ ಆರೋಪಿಗೆ ಜಾಮೀನು ತಿರಸ್ಕಾರ: ಆ‌ಗಸ್ಟ್​​ 6ಕ್ಕೆ ವಿಚಾರಣೆ ಮುಂದೂಡಿಕೆ

Spread the loveಹುಬ್ಬಳ್ಳಿ: ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್​​​ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ