ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ದಂಡ ಪಾವತಿಗೆ ರಿಯಾಯಿತಿ ಆಫರ್ ನೀಡಿದೆ. ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇಕಡ 50ರಷ್ಟು ರಿಯಾಯತಿ ಘೋಷಿಸಿ ಸಾರಿಗೆ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ಈ ತಿಂಗಳ 23ರಿಂದ ಸೆಪ್ಟೆಂಬರ್ 12ರೊಳಗೆ ದಂಡ ಪಾವತಿಸಿದರೆ ಮಾತ್ರ ದಂಡದ ಡಿಸ್ಕೌಂಟ್ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದಿನ ಅವಧಿಯಲ್ಲಿ 2023ರ ಫೆಬ್ರವರಿ 23ರೊಳಗೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡಿ, ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

ಸಂಚಾರ ನಿಯಮ ಪಾಲಿಸಿ : ಆಗಸ್ಟ್ 23ರಿಂದ ಸೆಪ್ಟೆಂಬರ್ 12ರ ವರೆಗಿನ ಅವಧಿಯಲ್ಲಿ ಪಾವತಿ ಮಾಡಿದರೆ ಎಲ್ಲಾ ಸಂಚಾರ ಇ-ಚಲನ್ ದಂಡಗಳ ಮೇಲೆ ಪ್ರತಿಶತ 50ರಷ್ಟು ರಿಯಾಯತಿ ಪ್ರಕಟಿಸಲಾಗಿದೆ. ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಸಿಎಂ ಕೋರಿದ್ದಾರೆ.

ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇಕಡ 50ರಷ್ಟು ರಿಯಾಯತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇಕಡಾ 50ರಷ್ಟು ರಿಯಾಯತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಆದೇಶ
Laxmi News 24×7