Breaking News

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

Spread the love

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, “ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ” ಎಂದು ಹೇಳಿದರು.

“ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಪ್ರತಿಭಟನೆಯನ್ನು ನಾಳೆಯಿಂದ ಒಂದು ವಾರದವರೆಗೂ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಡಲಿದ್ದೇವೆ” ಎಂದು ಘೋಷಿಸಿದರು.

ಪಾರದರ್ಶಕ ತನಿಖೆಯಾಗಲಿ: “ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್‍ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು. ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ನಾವು ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ” ಎಂದು ತಿಳಿಸಿದರು.

“ತನಿಖೆ ವಿಚಾರದಲ್ಲಿ ಇಂದೂ ಕೂಡ ನಾವು ಹಿಂದೆ ಸರಿದಿಲ್ಲ. ಆದರೆ, ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀಕ್ಷೇತ್ರದ ಬಗ್ಗೆ ಅಪಪ್ರಚಾರಗಳು ಮಾಡಲಾಗುತ್ತಿದೆ. ಇಂಥ ಅಪಪ್ರಚಾರವನ್ನು ನಿಲ್ಲಿಸುವ, ತಡೆಯುವ ಮತ್ತು ಕಟ್ಟಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ” ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ವಾಹನ ಸವಾರರೇ ಗಮನಿಸಿ.. ಸಂಚಾರ ನಿಯಮ ಉಲ್ಲಂಘನೆ ದಂಡ ಬಾಕಿ ಪಾವತಿಗೆ ಮತ್ತೊಮ್ಮೆ ಶೇ.50 ರಿಯಾಯಿತಿ ಘೋಷಣೆ

Spread the love ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ