ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ
ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, ವೇದಗಂಗಾ ನದಿಗಳಿಗೆ ಇವತ್ತು ನೀರು ಕಡಿಮೆ ಆಗುತ್ತೆ ಜನರು ಪ್ರವಾಹದ ಕುರಿತು ಆತಂಕ ಪಡುವ ಅಗತ್ಯ ಇಲ್ಲ ಎಂದು ಎಂದು ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಹೇಳಿದರು.
ಅವರು ಇವತ್ತು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿ ಮಾತನಾಡಿ ಅವರು ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ.ಪ್ರವಾಹ ಇಳಿಕೆ ಆಗುತ್ತೆ.ಜನರು ನದಿಯ ಹತ್ತಿರ ಸ್ನಾನ,ಬಟ್ಟೆ,ವಾಹನಗಳನ್ನು ತೊಳೆಯಲು ಹೋಗಬಾರದೆಂದು ಮನವಿಯನ್ನು ಮಾಡಿಕೊಳ್ಳುತ್ತವೆ.
ಶ್ರೀವೀರಭದ್ರೇಶ್ವರ ದೇವಸ್ಥಾನ ಮುಳಗಡೆಯಾಗಿದೆ.ಅಮವಾಸ್ಯೆ ಇರುವ ಕಾರಣ ಭಕ್ತರು ದೂರದಿಂದ ನಿಂತು ದೇವರ ದರ್ಶನ ಪಡೆಯಬೇಕು ಹಾಗೂ ಪ್ರವಾಹ ಮುಂಜಾಗ್ರತಾ ಕ್ರಮವಾಗಿ ಬೋಟ,ಕಾಳಜಿ ಕೇಂದ್ರ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.