Breaking News

ಕೆಜಿಎಫ್ ಸಿನಿಮಾ ಖ್ಯಾತಿಯ ನಟ ದಿನೇಶ್ ಮಂಗಳೂರು ನಿಧನ

Spread the love

ಉಡುಪಿ: ನಟ, ಕಲಾ ನಿರ್ದೇಶಕ ದಿನೇಶ್ ಮಂಗಳೂರು ಅವರು ಇಂದು (ಸೋಮವಾರ) ಮುಂಜಾನೆ ಜಿಲ್ಲೆಯ ಕುಂದಾಪುರದ ಕೋಟೇಶ್ವರ ಸರ್ಜನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

‘ಆ ದಿನಗಳು’, ‘ಕೆಜಿಎಫ್’, ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ನಟನ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

ಕೆಲ ದಿನಗಳ ಹಿಂದೆ ಅವರಿಗೆ ಸ್ಟ್ರೋಕ್ ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು, ಬಳಿಕ ಊರಿಗೆ ಮರಳಿದ್ದರು. ಮತ್ತೆ ಅಸ್ವಸ್ಥಗೊಂಡು ಕೋಟೇಶ್ವರದ ಸರ್ಜನ್ ಆಸ್ಪತ್ರೆಗೆ ದಾಖಲಾಗಿದ್ದರು. ಪಾರ್ಥಿವ ಶರೀರವನ್ನು ಬೆಂಗಳೂರಿಗೆ ಕೊಂಡೊಯ್ಯುವ ತಯಾರಿ ನಡೆಯುತ್ತಿದ್ದು, ಅಲ್ಲಿಯೇ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ