ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲರ್ಟ್ ಘೋಷಣೆ: ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ವಿಜಯಪುರ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಭಾನುವಾರ ಎಲ್ಲೆಲ್ಲಿ ಮಳೆ?: ಆಗುಂಬೆ, ಸಿದ್ದಾಪುರ, ಲೋಂಡಾ, ಕದ್ರಾ, ಗೇರುಸೊಪ್ಪ, ಕ್ಯಾಸಲ್ರಾಕ್, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಶೃಂಗೇರಿ, ಹೊನ್ನಾವರ, ಕೋಲಾರ, ಸಿಂಧನೂರು ಹಾಗೂ ದಾವಣಗೆರೆಯಲ್ಲಿ ಭಾನುವಾರ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.