ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.
ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಪದವಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.
AIDSO ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪದವಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ.
ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ.
ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ
ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು.
ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಅಗ್ರಹಿಸಿದರು.
Laxmi News 24×7