Breaking News

ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು,

Spread the love

ಬೆಂಗಳೂರು, ಡಿ.24- ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 5 ಲಕ್ಷ ರೂ. ಬೆಲೆಯ 100 ಗ್ರಾಂ ಎಂಡಿಎಂಎ, ಕಾರು, ಬೈಕ್, 5 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಉದೆಲುದೇಯುಜಾ (33), ಕೇರಳ ಮೂಲದ ಪ್ರಸೂನ್ (27) ಮತ್ತು ಆನಂದ್ ಚಂದನ್ (27) ಬಂಧಿತರು.

ಯಲಹಂಕ ಪೊಲೀಸ್ ಠಾಣೆ ಸರಹದ್ದಿನ ರಾಮಕೃಷ್ಣಪ್ಪ ಬಿಲ್ಡಿಂಗ್ ಮುಂಭಾಗ 5ನೆ ಕ್ರಾಸ್, ಬಾಲಾಜಿ ಲೇಔಟ್, ಕಟ್ಟಿಗೇನಹಳ್ಳಿ ಸಮೀಪ ಕಾರಿನಲ್ಲಿ ಮಾದಕ ಮತ್ತು ಎಂಡಿಎಂಎ ಇಟ್ಟುಕೊಂಡು ಮಾರಾಟ ಮಾಡಲು ಹೊಂಚುಹಾಕುತ್ತಿದ್ದರು. ಮುಂಬರುವ ಕ್ರಿಸ್‍ಮಸ್ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಗಿರಾಕಿಗಳಿಗೆ, ಸಾಫ್ಟ್‍ವೇರ್ ಉದ್ಯೋಗಿಗಳಿಗೆ ಮಾರಾಟ ಮಾಡಲು ಬಂದಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನೈಜೀರಿಯನ್ ದೇಶದ ಪ್ರಜೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ