ಜಾಗತೀಕ ಟ್ರೈಅಥ್ಲಾನ್’ ಸ್ಪರ್ಧೆಯಲ್ಲಿ ಐಜಿಪಿ ಸಂದೀಪ್ ಪಾಟೀಲ್ ಸಾಧನೆ
ರಾಜ್ಯದ ಕೀರ್ತಿ ಹೆಚ್ಚಿಸಿದ ಐಜಿಪಿ ಸಂದೀಪ್ ಪಾಟೀಲ್…
ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಐಜಿಪಿ ಸಂದೀಪ್ ಪಾಟೀಲ್ ಅವರು ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ ಒಂದಾದ ಟ್ರೈಅಥ್ಲಾನ್‌ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ರಾಜ್ಯದ ಹೆಮ್ಮೆ ಹೆಚ್ಚಿಸಿದ್ದಾರೆ.
ಕರ್ನಾಟಕದ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಐಜಿಪಿ ಸಂದೀಪ್ ಪಾಟೀಲ್ ಅವರು ಡೆನ್ಮಾರ್ಕ್‌ನ ರಾಜಧಾನಿ ಕೋಪನಹೆಗನ್‌ನಲ್ಲಿ ನಡೆದ ವಿಶ್ವದ ಅತ್ಯಂತ ಕಠಿಣ ಸ್ಪರ್ಧೆಗಳಲ್ಲಿ ಒಂದಾದ ಟ್ರೈಅಥ್ಲಾನ್‌ನ್ನು ಯಶಸ್ವಿಯಾಗಿ
ಪೂರ್ಣಗೊಳಿಸಿ, ರಾಜ್ಯದ ಹೆಮ್ಮೆ ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಅವರು 3.8 ಕಿಮೀ ಈಜು, 180 ಕಿಮೀ ಸೈಕ್ಲಿಂಗ್ ಮತ್ತು 42 ಕಿಮೀ ಓಟವನ್ನು ಕೇವಲ 14 ಗಂಟೆ 45 ನಿಮಿಷಗಳಲ್ಲಿ ಮುಗಿಸಿರುವುದು ವಿಶೇಷವಾಗಿದ್ದು, ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.