ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ
; ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ! ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಮಾತನಾಡಿದ ಜಿಗಜಿಣಗಿ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ ಬೆಳ್ಳಿಗ್ಗೆ 10.30 ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಂದು ನಗರದ ಗಾಂಧಿ ಸರ್ಕಲ್ ವಿಜಯಪುರ ನಗರಬನ್ನಿ, ಧರ್ಮವನ್ನು ನಾವು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂಬ ಧ್ಯೇಯದೊಂದಿಗೆ ಧರ್ಮರಕ್ಷಣೆಯ ಪಣ ತೊಡೋಣ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ ಎಂದು ತಿಳಿಸಿದ್ದಾರೆ.
Laxmi News 24×7