Breaking News

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿ ಬಿಟ್ಟುಹೋಗಿದ್ದರೆ ಮಾಹಿತಿ ನೀಡಲು ಸೆ.1ರವರೆಗೆ ಅವಕಾಶ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆಪ್ಟೆಂಬರ್ 1ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಸೆಪ್ಟೆಂಬರ್ 1ರ ವರೆಗೆ ಅವಕಾಶ: ಆಗಸ್ಟ್​​ 22, 2025ರಂದು ಯಾವುದೇ ಜಾತಿ, ಉಪ ಜಾತಿಗಳು ಬಿಟ್ಟು ಹೋಗಿದ್ದರೆ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 7 ದಿನಗಳ ಒಳಗೆ ನೀಡಲು ಕೋರಲಾಗಿತ್ತು. ಆದರೆ, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ, ಮನವಿಗಳನ್ನು ನೀಡುವ ಅವಧಿಯನ್ನು 1.09.2025ರ ಸಂಜೆ 5 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್​ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಂಪರ್ಕ ಸಂಖ್ಯೆ: ಸಾರ್ವಜನಿಕರು ತಮ್ಮ ಸಲಹೆ, ಸೂಚನೆ, ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂಬರ್ 16, ಡಿ. ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ, ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಹೆಚ್ಚಿನ‌ ವಿವರಗಳಿಗೆ ದೂರವಾಣಿ ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ