Breaking News

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the love

ಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, ಪಿಯು ಕಾಜೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ , ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ.29 ರಂದು ರಜೆ ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ: ಯಾವುದೇ ಜಾತಿ ಬಿಟ್ಟುಹೋಗಿದ್ದರೆ ಮಾಹಿತಿ ನೀಡಲು ಸೆ.1ರವರೆಗೆ ಅವಕಾಶ

Spread the love ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ