ಬಿ.ವಿ ಬೆಲ್ಲದ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕೆಎಲ್ಇ ಸಂಸ್ಥೆಯ ಬಿ ವಿ ಬೆಲ್ಲದ್ ಕಾನೂನು ಮಹಾ ವಿದ್ಯಾಲಯ ಬೆಳಗಾವಿ. ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ದಿನಾಂಕ 29.08.2025 ರಂದು ಆಯೋಜಿಸಲಾಗಿತ್ತು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾಕ್ಟರ್ ಜ್ಯೋತಿ ಜಿ ಹಿರೇಮಠ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು
ವಿವರಿಸಿ ಕಾನೂನು ವಿದ್ಯಾರ್ಥಿಗಳು ಕಾನೂನು ಅಧ್ಯಯನ ಮಾಡುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ವೃದ್ಧಿಪಡಿಸಿಕೊಳ್ಳುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಎಲ್ಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರತಿ ಶನಿವಾರ ಬೆಳಿಗ್ಗೆ 8.30 ರಿಂದ 9.30 ರ ವರೆಗೆ “ಒಂದು ಗಂಟೆಗಳ ಕಾಲ ದೈಹಿಕ ವ್ಯಾಯಾಮ ಮಾಡುವ ವಿಶೇಷ ಪ್ರವೃತ್ತಿಯನ್ನು
ಪ್ರಾರಂಭಿಸಿದ್ದಾರೆ.” ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೀಚಾರರಾವ್ ಮತ್ತು ಎಲ್ಲ ಶಿಕ್ಷಕ ವರ್ಗದವರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.