Breaking News

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,

Spread the love

ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ಕಾಗವಾಡ ವಿಧಾನಸಭಾ ಕ್ಷೇತ್ರದ ಶೇಡಬಾಳ ಗ್ರಾಮದ ಬಸವಣ್ಣ ದೇವಾಲಯ ಆವರಣದಲ್ಲಿ‌ ಇಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪೌರಾಡಳಿತ ನಿರ್ದೇಶನಾಲಯದ ಸಂಯುಕ್ತ ಆಶ್ರಯದಲ್ಲಿ, ಅಮೃತ 2.0 ಯೋಜನೆಯಡಿಯಲ್ಲಿ,
ಅಂದಾಜು ₹43.67 ಕೋಟಿ ವೆಚ್ಚದಲ್ಲಿ, ಕೃಷ್ಣಾ ನದಿ ಮೂಲದಿಂದ ಕಾಗವಾಡ, ಶೇಡಬಾಳ ಮತ್ತು ಉಗಾರ ಖುರ್ದ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ 2ನೇ ಹಂತದ ಮಹತ್ವಾಕಾಂಕ್ಷಿ ಕಾಮಗಾರಿಯ ಭೂಮಿಪೂಜೆಯನ್ನು ಮಾನ್ಯ ಶಾಸಕರಾದ ಶ್ರೀ ಭರಮಗೌಡ (ರಾಜು) ಕಾಗೆ ಅವರ ಜೊತೆಗೂಡಿ ನೆರವೇರಿಸಲಾಯಿತು.
ಜನಜೀವನಕ್ಕೆ ಅತ್ಯವಶ್ಯಕವಾದ ಈ ಯೋಜನೆ ಶೀಘ್ರದಲ್ಲೇ ಯಶಸ್ವಿಯಾಗಿ ಪೂರ್ಣಗೊಂಡು, ಸಾವಿರಾರು ಕುಟುಂಬಗಳ ಕನಸು ನನಸಾಗಲಿದೆ ಎಂದು ಈ‌ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಕಾಗವಾಡ, ಶೇಡಬಾಳ, ಉಗಾರ ಖುರ್ದ ಪಟ್ಟಣ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು, ಮುಖಂಡರು ಹಾಗೂ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ