ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹೀಗಾಗಿ ಎರಡು ದಿನ ಬಾರ್ ಬಂದ್ ಇರಲಿವೆ.ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದು, ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police) ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ
ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.