Breaking News

ಕೃಷಿ ಹೊಂಡದಲ್ಲಿ ಮಹಿಳೆ, ಜಮೀನು ಮಾಲೀಕನ ಶವ ಪತ್ತೆ; ಎಸ್ಪಿ ಹೇಳಿದ್ದು ಹೀಗೆ

Spread the love

ಚಾಮರಾಜನಗರ: ಕೃಷಿ ಹೊಂಡದಲ್ಲಿ ಮಹಿಳೆ ಹಾಗೂ ಯುವಕನ ಶವ ಪತ್ತೆಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಗುಳ್ಯದಬಯಲು ಎಂಬಲ್ಲಿ ನಡೆದಿದೆ.

ಗುಳ್ಯದಬಯಲು ಗ್ರಾಮದ ಮೀನಾಕ್ಷಮ್ಮ (32) ಹಾಗೂ ರವಿ (30) ಮೃತರು. ಮೀನಾಕ್ಷಮ್ಮ ವಿವಾಹಿತೆಯಾಗಿದ್ದು, ಎರಡು ಮಕ್ಕಳು ಕೂಡ ಇದ್ದಾರೆ.‌ ರವಿ ಅವಿವಾಹಿತನಾಗಿದ್ದು, ತಂದೆ ಸಾವಿನ ಬಳಿಕ ಕೃಷಿ ಚಟುವಟಿಕೆಯನ್ನು ನೋಡಿಕೊಳ್ಳುತ್ತಿದ್ದರು. ಕಳೆದ 5 ವರ್ಷಗಳಿಂದ ಮೀನಾಕ್ಷಮ್ಮ ರವಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು.

‘ಶನಿವಾರ ಸಂಜೆ 5ರ ತನಕವೂ ಕೂಡ ಜಮೀನಿನಲ್ಲಿ ಬೆಳ್ಳುಳ್ಳಿ ಕಟಾವು ಮಾಡಿ ಬಳಿಕ ಮನೆಗೆ ತೆರಳಿದ್ದ ಮೀನಾಕ್ಷಿ ಮನೆಯಲ್ಲಿ ನೀರಿಲ್ಲ, ರವಿ ತೋಟದಲ್ಲಿ ಮೋಟಾರ್ ಚಾಲು ಮಾಡಿ ಬರುತ್ತೇನೆಂದು ಹೋದವರು ವಾಪಸ್ ಬಂದಿದ್ದು ಮಾತ್ರ ಶವವಾಗಿ’ ಎಂದು ಮೃತ ಮೀನಾಕ್ಷಮ್ಮ ಸಹೋದರಿ ದೇವಿ ಕಣ್ಣೀರಿಟ್ಟಿದ್ದಾರೆ.

ಸಾವಿಗೆ ಕಾರಣವಾಯ್ತ ವಿವಾಹೇತರ ಸಂಬಂಧ? ಕೂಲಿ ನಾಲಿ ಮಾಡಿ ಬದುಕುತ್ತಿದ್ದ ಮೀನಾಕ್ಷಿ ರವಿಯ ಜಮೀನಿನಲ್ಲೇ ಕೆಲಸ‌ ಮಾಡುತ್ತಿದ್ದರು. ವಿವಾಹಿತೆ ಮೀನಾಕ್ಷಿ ಹಾಗೂ ಅವಿವಾಹಿತ ರವಿ ಜೊತೆ ವಿವಾಹೇತರ ಸಂಬಂಧ ಏರ್ಪಟ್ಟಿತ್ತು. ಈ ವಿವಾಹೇತರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಮೂಡಿ ಇಬ್ಬರೂ ಆತ್ಮಹತ್ಯೆ ಹಾದಿ ಹಿಡಿದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

‘ಕೃಷಿಹೊಂಡದ ಬದಿಯಲ್ಲಿ ಇಬ್ಬರ ಫೋನ್​​ ಮತ್ತು ಚಪ್ಪಲಿಗಳಿದ್ದವು.‌ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಕಾರಣ ಏನೆಂದು ಗೊತ್ತಿಲ್ಲ, ಸಾವಿನ ಬಗ್ಗೆ ಅನುಮಾನವಿಲ್ಲ, ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎನ್ನುತ್ತಾರೆ ರವಿಯ ಚಿಕ್ಕಪ್ಪ ನಂದೀಶ್.

ಈ ಕುರಿತು ಎಸ್ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ‘ಇಂದು ಬೆಳಗ್ಗೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಳ್ಯದ ಬಯಲು ಎಂಬ ಊರಿನಲ್ಲಿರುವ ಕೃಷಿ ಹೊಂಡದಲ್ಲಿ ಒಂದು ಶವ ಇದೆ ಎಂಬ ಮಾಹಿತಿ ಬಂದ ಮೇರೆಗೆ ಹನೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದಾಗ ಅಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯ ಪ್ರಕರಣ ಎಂದು ಕಂಡುಬಂದಿದೆ. ಮೀನಾಕ್ಷಮ್ಮ ಅವರ ತಾಯಿ ಈ ಕುರಿತಂತೆ ದೂರನ್ನು ಸಲ್ಲಿಸಿದ್ದಾರೆ. ಆ ದೂರಿನಲ್ಲಿ ಈ ಸಾವಿನ ಬಗ್ಗೆ ಅನುಮಾನ ಇದೆ ಎಂದು ಹೇಳಿದ್ದಾರೆ. ಹಾಗಾಗಿ, ನಾವು ಅನುಮಾನಾಸ್ಪದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮಾಡುತ್ತಿದ್ದೇವೆ. ಮೇಲ್ನೋಟಕ್ಕೆ ರವಿ ಹಾಗೂ ಮೀನಾಕ್ಷಮ್ಮ ಅವರ ನಡುವೆ ಸಂಬಂಧ ಇತ್ತು. ಅವರ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಕಂಡುಬರುತ್ತಿದೆ. ಈಗಾಗಲೇ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: “ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆ ವಿಚಾರದಲ್ಲಿ ಬಿಜೆಪಿ ನಾಯಕರು ಕುಂಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ