Breaking News

ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್

Spread the love

ಬೆಂಗಳೂರು, ಆಗಸ್ಟ್ 31: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಒಂದು ಕಾಲು ಬಿಜೆಪಿಯಲ್ಲಿ (BJP ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಆದರೆ ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಆ ಸೆಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?

‘‘ಡಿಕೆ ಶಿವಕುಮಾರ್ ಈಗಾಗಲೇ ಬಿಜೆಪಿಯಲ್ಲಿ ಒಂದು ಕಾಲು ಇಟ್ಟಾಗಿದೆ. ನಮ್ಮ ಮಹಾಮಹಿಮ ರಾಜ್ಯಾಧ್ಯಕ್ಷರ ಜೊತೆ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆದಿದೆ. ಸುಮಾರು 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬಿಜೆಪಿಗೆ ಬಂದು ‘‘ನಮಸ್ತೇ ಸದಾ ವತ್ಸಲೇ’’ ಎಂದು ಹೇಳುವ ಯೋಜನೆಯನ್ನೂ ಅವರು ಹಾಕಿಕೊಂಡಿದ್ದರು. ಆದರೆ 12 ರಿಂದ 13 ಮಂದಿ ಶಾಸಕರ ಬೆಂಬಲವುಯವೂ ಅವರಿಗಿಲ್ಲ, ಎಲ್ಲರೂ ಸಿಎಂ ಸಿದ್ದರಾಮಯ್ಯ ಕಡೆ ಇದ್ದಾರೆ ಎಂಬುದು ಇಂಟಲಿಜೆನ್ಸ್ ಮಾಹಿತಿಯಿಂದ ತಿಳಿದು ಬಂದಿತ್ತು. ಈ ಬಗ್ಗೆ ನಮ್ಮ ಹೈಕಮಾಂಡ್ ನಾಯಕರೇ ಒಬ್ಬರು ನನ್ನ ಬಳಿ ಕೇಳಿದ್ದರು. ಡಿಕೆ ಶಿವಕುಮಾರ್ ಬಳಿ ಎಷ್ಟು ಕಾಂಗ್ರೆಸ್ ಶಾಸಕರಿದ್ದಾರೆ ಎಂದು ಕೇಳಿದ್ದರು. ಒಂದು ಹತ್ತು ಮಂದಿ ಇರಬಹುದು. ಬಿಜೆಪಿಗೆ ಬರುತ್ತಾರೆಂದು ಗೊತ್ತಾದರೆ ಅವರು ಕೂಡ ಇರಲಿಕ್ಕಿಲ್ಲ ಎಂದು ಹೇಳಿದ್ದೆ’’ ಎಂದು ಯತ್ನಾಳ್ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ