Breaking News

ಜಾತಿ ನೋಡಲ್ಲ; ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಸರ್ಕಾರದ ಗುರಿ: ಸಿಎಂ

Spread the love

ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು, ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಉಪ್ಪಾರ ಸಮುದಾಯ ಭವನ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ನೆಲದ ದಾರ್ಶನಿಕರು, ಮಹಾನುಭಾವರು ಮನುಕುಲಕ್ಕೆ ನೀಡಿದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದರು.

ಚಾತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ನಾವು ಉಪ್ಪಾರ ಸಮುದಾಯವನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು. ಈ ಉದ್ದೇಶದಿಂದಲೇ ನಾವು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆವು ಎಂದು ಸಿಎಂ ವಿವರಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ