ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು.
ಈ ಸಂದರ್ಭದಲ್ಲಿ ಹೀರಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷರು, ಸದಸ್ಯರು, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.