Breaking News

ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ

Spread the love

ಮೈಸೂರು: “ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್.ಐ.ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

“SIT ರಚನೆಯಾದ ಪ್ರಾರಂಭದಲ್ಲಿ ಎನ್​ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವತಃ ಸತ್ಯ ಹೊರಬರಲಿ ಎಂದು ಎಸ್​​ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಮೇಲಿನ ಅನುಮಾನದ ತೂಗುಗತ್ತಿ ನಿವಾರಣೆಯಾಗಬೇಕೆಂದಿದ್ದಾರೆ. ಎಸ್​ಐಟಿ ತನಿಖೆ ಸ್ವತಂತ್ರವಾಗಿ ಮಾಡುತ್ತಿದ್ದು ನಾವ್ಯಾರು ಅದರಲ್ಲಿ ಹಸ್ತಕ್ಷೇಪ ಮಾಡಿಲ್ಲ. ಸತ್ಯ ಹೊರಬರಬೇಕು” ಎಂದರು.

ಎಲ್ಲಾ ವಿಷಯಗಳನ್ನೂ ರಾಜಕೀಯವಾಗಿ ಬಳಸಲು ಹೋಗಬಾರದು: ಹೊರದೇಶಗಳಿಂದ ಇದಕ್ಕಾಗಿ ಹಣ ಬಂದಿದೆ ಎಂಬ ಬಿಜೆಪಿ ಆರೋಪದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಬಿಜೆಪಿಯವರಿಗೆ ಹಣ ಬಂದಿದೆ. ವಿರೋಧ ಪಕ್ಷದವರು ಟೀಕೆಯನ್ನು ಮಾಡಲಿ. ಆದರೆ, ಎಲ್ಲಾ ವಿಷಯಗಳನ್ನೂ ರಾಜಕೀಯವಾಗಿ ಬಳಸಲು ಹೋಗಬಾರದು. ಇದರಲ್ಲಿ ಸತ್ಯವಿಲ್ಲ” ಎಂದರು.

ಬಿಜೆಪಿ ಯಾರ ಪರ?: ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ? ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ

Spread the loveಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ‌ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ