Breaking News

ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್.

Spread the love

ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್.
ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರು ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.
ಹುಲಕೊಪ್ಪ ಹಾಗೂ ಗಳಗಿ ಹುಲಕೊಪ್ಪ ಗ್ರಾಮಗಳ ಚನ್ನಬಸಪ್ಪ ಹಳ್ಯಾಳ ಅವರ ಜಮೀನಿಗೆ ಭೇಟಿ ನೀಡಿ, ಕಾಡುಹಂದಿ, ಕರಡಿ ಹಾಗೂ ಇತರ ಕಾಡು ಪ್ರಾಣಿಗಳಿಂದ ಗೋವಿನಜೋಳದ ಬೆಳೆ ಹಾನಿ ಹಾಗೂ ನಾಗರಾಜ ಹಳ್ಯಾಳ ಅವರ ತೋಟದ ಭತ್ತದ ಬೆಳೆ ಹಾಗೂ ಕಬ್ಬು ಬೆಳೆ ವೀಕ್ಷಣೆ ಮಾಡಿ, ಮಾಹಿತಿ ಪಡೆದುಕೊಂಡರು.
ಗಳಗಿ ಗ್ರಾಮದ ರೈತರಾದ ಅಶೋಕ ಈರಪ್ಪ ಹುಬ್ಬಳ್ಳಿ ಅವರ 1 ಎಕರೆ 38 ಗುಂಟೆ ಜಮೀನು, ರೇಖಾ ಗಂಗಪ್ಪ ಪೂಜಾರ ಅವರ 4 ಎಕರೆ 20 ಗುಂಟೆ ಜಮೀನು, ಧರ್ಮರಾಜ ಸುಭಾಷ ಚಂದ್ರಗೌಡ ಪಾಟೀಲ ಅವರ 5 ಎಕರೆ 20 ಗುಂಟೆ ಜಮೀನು ಮತ್ತು ಹುಲಕೊಪ್ಪ ಗ್ರಾಮದ ರೈತ ಈರಪ್ಪ ಚೆನ್ನಪ್ಪ ಬಡಿಗೇರ ಅವರ 9 ಎಕರೆ 38 ಗಂಟೆ ಜಮೀನೀನಲ್ಲಿ ಗೋವಿನಜೋಳ ಬೆಳೆಯು ಹಾನಿಯಾದ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ನಂತರ ಅವರು ಸ್ಥಳದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ಕಲಘಟಗಿ ಹಾಗೂ ಧಾರವಾಡ ತಾಲೂಕಿನ ಕೆಲವು ಪ್ರದೇಶಗಳು ಮಲೆನಾಡಿನ ಸೆರಗಿನಲ್ಲಿ ಇದ್ದು, ಗುಡ್ಡ, ಕಾಡು ಹೆಚ್ಚಾಗಿವೆ. ಮತ್ತು ಕಾಡುಪ್ರಾಣಿಗಳು ಸಾಕಷ್ಟು ಇವೆ.
ರೈತರು ಪ್ರತಿವರ್ಷ ಬೆಳೆದ ಬೆಳೆಯನ್ನು ಸುಸೂತ್ರವಾಗಿ ರಾಶಿ ಮಾಡಿಕೊಂಡು ಬರಲು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಲು ಕ್ರಮವಹಿಸಬೇಕಿದೆ ಸೂಚಿಸಿದರು.‌ ಮುಂದಿನ ಒಂದು ವಾರದಲ್ಲಿ ಪ್ರಾಣಿಗಳಿಂದ ಬೆಳೆ ಹಾನಿಯಾಗಿರುವ ಪ್ರದೇಶದಲ್ಲಿ ಕಲಘಟಗಿ ಹಾಗೂ ಧಾರವಾಡ ತಾಲೂಕಿನ ಕಂದಾಯ, ಕೃಷಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಮಾಡಿ, ವರದಿ ಸಲ್ಲಿಸಬೇಕು.
ಮತ್ತು ಸರ್ಕಾರದ ನಿಯಮಾನುಸಾರ ಪ್ರತಿ ಹೇಕ್ಟೆರಿಗೆ ಪರಿಹಾರವನ್ನು ಅರಣ್ಯ ಇಲಾಖೆ ತಕ್ಷಣ ಬಿಡುಗಡೆ ಮಾಡಬೇಕೆಂದರು, ಜತೆಗೆ ರೈತರ ಬೇಡಿಕೆಗಳಾದ ಕಾಡುಪ್ರಾಣಿಗಳ ಹಾನಿಯಿಂದ ರಕ್ಷಣೆ, ಹೆಚ್ಚಿನ ಪರಿಹಾರ ಬಿಡುಗಡೆ, ಕಾಡುಪ್ರಾಣಿಗಳನ್ನು ಹೆದರಿಸಲು ಬಂದೂಕು ಬಳಕೆಗೆ ಅನುಮತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಸೂಕ್ತ ಪರಿಹಾರ ನೀಡಬೇಕು.
ಕಾಡಿನ ಅಂಚಿನಲ್ಲಿರುವ ರೈತರ ಜಮೀನುಗಳ ಪಕ್ಕದ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ನಿರಂತರವಾಗಿ ಪೆಟ್ರೋಲಿಂಗ್ ಮಾಡಬೇಕು. ಹೆಚ್ಚಿನ ಸದ್ದು ಹಾಗೂ ಬೆಳಕು ನೋಡುವುದರಿಂದ ಪ್ರಾಣಿಗಳು ಹೆದರಿ ರೈತರ ತೋಟಗಳತ್ತ ಬರುವುದು ಕಡಿಮೆಯಾಗುತ್ತದೆ. ರೈತರೊಂದಿಗೆ ಚರ್ಚಿಸಿ, ಅವರೊಡನೆ ಇದ್ದು, ಅರಣ್ಯ ಇಲಾಖೆ ಉತ್ತಮವಾಗಿ ಕೆಲಸ ಮಾಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ,ಸುಳಗಾ ಗ್ರಾಮದ ಸಾರ್ವಜನಿಕ ಗಣಪತಿ ದರ್ಶನ್ ಪಡೆದುಕೊಂಡ ಎಐಸಿಸಿ ಕಾರ್ಯದರ್ಶಿ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ