Breaking News

ವಿಷ್ಣು ಸ್ಮಾರಕಕ್ಕೆ ಜಾಗ, ʼಕರ್ನಾಟಕ ರತ್ನʼ ಪ್ರಶಸ್ತಿಗೆ ಆಗ್ರಹಿಸಿ ಸಿಎಂ ಭೇಟಿಯಾದ ನಟಿ ಭಾರತಿ, ಅನಿರುದ್ಧ್: ಸರ್ಕಾರದಿಂದ ನಾಳೆ ತೀರ್ಮಾನ?

Spread the love

ಬೆಂಗಳೂರು: ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ, ನಟ ಅನಿರುದ್ಧ್ ಅವರು, ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗವನ್ನು ಮೀಸಲಿಡಬೇಕು. ವಿಷ್ಣು ಹುಟ್ಟುಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿ ನೀಡಬೇಕು. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಕೊಡಬೇಕು ಎಂದು ಅವರು ಮನವಿ ಮಾಡಿದರು.

ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ನಟಿ ಭಾರತಿ ವಿಷ್ಣುವರ್ಧನ್, ”ಅಭಿಮಾನಿಗಳಿಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಕೇಳಿದ್ದೇವೆ. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

veteran-actress-bharathi-vishnuvardhan-and-actor-anirudh-met-cm-siddaramaiah

ಸಿಎಂ ಸಿದ್ದರಾಮಯ್ಯ, ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ , ಸಚಿವ ಬೈರತಿ ಸುರೇಶ್ ಇತರರು (X@siddaramaiah)

”ನಟ ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಕೊಡಿ ಎಂದು ನಾನು ಕೇಳಲ್ಲ. ಆದರೆ ಅಭಿಮಾನಿಗಳು ಕೇಳುತ್ತಿದ್ದಾರೆ. ಅವರಿಗಾಗಿ ಕರ್ನಾಟಕ ರತ್ನ ಕೊಡಬೇಕಿದೆ” ಎಂದು ಅವರು ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ