ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್ಗಳಲ್ಲಿದ್ದ 55 ಕೋಟಿ ರೂ. ಜಪ್ತಿ
ಬೆಂಗಳೂರು/ಚಿತ್ರದುರ್ಗ (ಸೆಪ್ಟೆಂಬರ್ 03): ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಚಿತ್ರದುರ್ಗದ (Chitradurga) ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ (KC Veerendra Pappi) ಅವರನ್ನು ಇಡಿ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ.
ಮತ್ತೊಂದೆಡೆ ವಿರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದೆ.
ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದೆ. ಅಲ್ಲದೇ 5 ದುಬಾರಿ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದೆ.
ಸದ್ಯ ಇಡಿ ವಶದಲ್ಲಿರುವ ಶಾಸಕ ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಅವರ ಮನೆಯಲ್ಲಿರುವ ಐಶಾರಾಮಿ ಕಾರುಗಳ ಬಗ್ಗೆ ಪರಿಶೀಲನೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮನೆ ಮಾತ್ರವಲ್ಲದೇ ಶಾಸಕ ವೀರೇಂದ್ರ ಪಪ್ಪಿಯ ಬ್ಯಾಂಕ್ ಖಾತೆಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿ 55 ಕೋಟಿ ರೂ. ಫ್ರೀಜ್ ಮಾಡಿದ್ದಾರೆ.