Breaking News

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ

Spread the love

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ

ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ನಗರದಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. ವಶಕ್ಕೆ ಪಡೆದಿರುವ ಭೂಮಿಯ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ಎಂದು ಅಂದಾಜಿಸಲಾಗಿದೆ.

ದೊಡ್ಡಬಳ್ಳಾಪುರ ನಗರದ ಪ್ರಭಾವಿಗಳಾದ ಕೆ.ಬಿ. ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ. ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು. ಅವರ ಪಹಣಿ ವಜಾಗೊಳಿಸುವ ಮೂಲಕ ಸರ್ಕಾರದ ಜಮೀನನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳು ಸೆಪ್ಟೆಂಬರ್ 2 ರಂದು ಆದೇಶ ಹೊರಡಿಸಿದ್ದಾರೆ. ಸರ್ಕಾರದ ವಶಕ್ಕೆ ಪಡೆದಿರುವ 6 ಎಕರೆ ಜಮೀನು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಅಂಚಿನಲ್ಲೆ ಇದೆ. ಅಲ್ಲದೆ ರಾಷ್ಟ್ರ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ ತರಬೇತಿ ಕೇಂದ್ರದ ಪಕ್ಕದಲ್ಲೇ ಇದೆ.

ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುವಂತೆ, “ಗೋಮಾಳ ಜಮೀನು ಕಬಳಿಸುವ ಷಡ್ಯಂತ್ರದಲ್ಲಿ ತಾಲೂಕು ಕಚೇರಿಯ ಕಂದಾಯ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಚೇರಿ ದಾಖಲೆಗಳನ್ನು ಪರಿಶೀಲಿಸದೇ ಆದೇಶ ಮಾಡುವ ಮೂಲಕ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಕಬಳಿಸಲು ಸಹಕರಿಸಿದ್ದಾರೆ” ಎಂದು ವಿವರಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿದ ಈ ಜಮೀನಿನಲ್ಲಿ 1998 ರಿಂದಲೂ ರಾಗಿ ಬೆಳೆ ಬೆಳೆಯುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ, ಗೂಗಲ್ ನಕ್ಷೆ ಪರಿಶೀಲನೆಯಲ್ಲಿ 2024ರ ವರೆಗೂ ಈ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯದೇ ಇರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ಉಲ್ಲೇಖಿಸಿದ್ದಾರೆ.

ನಕಲಿ ದಾಖಲೆಗಳನ್ನು ಸಲ್ಲಿಸಿ ಭೂ ಮಂಜೂರಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಸದರಿ ಆದೇಶವನ್ನು ರದ್ದು ಮಾಡಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುವಂತೆ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಿದರು, ಈ ಅರ್ಜಿಗಳ ಮೇಲೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಹಶೀಲ್ದಾರ್ ನೀಡಿದ ವರದಿಯ ಮೇಲೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ತಹಶೀಲ್ದಾರ್​ ನೀಡಿದ ವರದಿಯಲ್ಲಿ ಕೆ.ಬಿ. ಮುದ್ದಪ್ಪ, ಪುರುಶೋತ್ತಮ್ ಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರಿಗೆ ಸಾಗುವಳಿ ಚೀಟಿ ನೀಡುವ ಬಗ್ಗೆ ಯಾವುದೇ ದಾಖಲೆಗಳಿಲ್ಲ, ಭೂ ಮಂಜೂರಾತಿ ಆಗಿರುವ ಬಗ್ಗೆ ಯಾವುದೇ ದಾಖಲೆಗಳು ಲಭ್ಯವಿಲ್ಲ, ಅರ್ಜಿದಾರರು ಮೂಲ ದಾಖಲೆಗಳನ್ನು ಹಾಜರಿಪಡಿಸಲು ವಿಫಲರಾಗಿದ್ದಾರೆ, ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಜಾಗವನ್ನು ಕಬಳಿಸುವ ಪ್ರಯತ್ನ ಮಾಡಿರುವುದು ಸ್ವಷ್ಟವಾಗಿದೆ ಎಂದು ಹೇಳಲಾಗಿದೆ. ಕಂದಾಯ ಇಲಾಖೆಯ ನೌಕರರು ಸಹ ಇದರಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.


Spread the love

About Laxminews 24x7

Check Also

ದರ್ಶನ್​​ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕೋರ್ಟ್​ ಹಾಲ್​​​ಗೆ ನುಗ್ಗಿದ ಅಪರಿಚಿತ ವ್ಯಕ್ತಿ,

Spread the loveಬೆಂಗಳೂರು, (ಸೆಪ್ಟೆಂಬರ್ 03): ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ ಕೇಸಿನ (Renukaswamy Murder Case) ಆರೋಪಿಗಳಾದ ನಟ ದರ್ಶನ್ (Darshan)  ಸೇರಿದಂತೆ 17 ಆರೋಪಿಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ