Breaking News

ಜಿಎಸ್​ಟಿ ದರ ಇಳಿಕೆಯಿಂದ ಜನರಿಗೆ ಅನುಕೂಲ, ರಾಜ್ಯಗಳಿಗೆ ನಷ್ಟ: ಸಚಿವ ರಾಮಲಿಂಗಾರೆಡ್ಡಿ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ ಹೊಡೆತ ಬಿದ್ದಿತ್ತು. ರಾಜ್ಯದಿಂದ 4.5 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿ ಕೇಂದ್ರ ಸರ್ಕಾರಕ್ಕೆ ಹೋಗುತ್ತಿತ್ತು. ಅಲ್ಲಿಂದ ನಮಗೆ ತೀರಾ ಕಡಿಮೆ ವಾಪಸ್​ ಬರುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿ​​​​​ಗೆ ಮಾತನಾಡಿದ ಅವರು, ಜಿಎಸ್​​ಟಿ ಸ್ತರ, ದರ ಇಳಿಕೆಯ ಬಳಿಕ ಕರ್ನಾಟಕಕ್ಕೆ 15 ಸಾವಿರ ಕೋಟಿ ಕೊರತೆಯಾಗುವುದು. ಇದನ್ನು ಕೇಂದ್ರ ಸರ್ಕಾರ ಕೊಡಬೇಕು. ನಮಗೆ ಅಲ್ಲ ಎಲ್ಲ ರಾಜ್ಯಗಳಿಗೂ ಕೊಡಬೇಕು. ರಾಜ್ಯ ಸರ್ಕಾರ ಕೊಡುವ 1 ರೂಪಾಯಿ ತೆರಿಗೆಯಲ್ಲಿ ಹಣದಲ್ಲಿ 12 ಪೈಸೆ ಮಾತ್ರ ಕೊಡುತ್ತಿದೆ ಎಂದು ಲೆಕ್ಕ ಹೇಳಿದರು.

ಜನರಿಗೆ ಅನುಕೂಲವಾಗಲಿದೆ: ಜಿಎಸ್​​ಟಿ ಇಳಿಕೆ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ, ಕೇಂದ್ರ ಸರ್ಕಾರದ ಈ ನಿರ್ಧಾರ ಜನರಿಗೆ ಅನುಕೂಲ ಆಗುತ್ತದೆ. ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತೆ. ನಮ್ಮಿಂದ ಹೆಚ್ಚುವರಿ ಕಲೆಕ್ಟ್ ಮಾಡ್ತಿದ್ದಾರೆ. ಆದರೆ, ನಮಗೆ ಕೊಡೋದು ಅತ್ಯಲ್ಪ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು, ರಾಜಣ್ಣ ಬಿಜೆಪಿಗೆ ಹೋಗುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಮಾಜಿ ಸಚಿವ ಕೆ.ಎನ್​. ರಾಜಣ್ಣ ಅವರು ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗಲ್ಲ. ಅವರು ಇಲ್ಲೇ ಇರ್ತಾರೆ. ನಾನು ಅವರ ಹುಟ್ಟುಹಬ್ಬಕ್ಕೆ ಹೋಗಿದ್ದೆ. ಅವರು 1972 ರಿಂದಲೂ ಕಾಂಗ್ರೆಸ್​ನಲ್ಲಿದ್ದಾರೆ. ಅವರು ಎಲ್ಲೂ ಹೋಗಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.


Spread the love

About Laxminews 24x7

Check Also

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

Spread the love ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ