Breaking News

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ

Spread the love

ಚಿಕ್ಕೋಡಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ಜಿಲ್ಲಾ ‌ಮಟ್ಟದ ಶಿಕ್ಷಕರ ದಿನಾಚರಣೆ
ಚಿಕ್ಕೋಡಿ-“ಗ್ರಾಮೀಣ ಪ್ರದೇಶದಲ್ಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ತಾಲ್ಲೂಕಿನ ವಾಳಕಿ, ಖಡಕಲಾಟ, ಜನವಾಡ, ಹಿರೇಕೋಡಿ ಹಾಗೂ ಕಮತೇನಹಟ್ಟಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಲಾಗಿದ್ದು, ಪ್ರತಿ ಶಾಲೆಯಲ್ಲಿ 2 ಕೊಠಡಿ ನಿರ್ಮಾಣಕ್ಕೆ ತಲಾ 25 ಲಕ್ಷ ಅನುದಾನ ಮಂಜೂರಾಗಿದೆ” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.
ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಚಿಕ್ಕೋಡಿ ಡಿಡಿಪಿಐ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುತ್ತಿದ್ದು, ಶಿಕ್ಷಕರು ಇವುಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ತರಬೇಕೆಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ಜಿಲ್ಲಾಧ್ಯಕ್ಷ ಸಿದ್ರಾಮ ಲೋಕನ್ನವರ ಮಾತನಾಡಿ, ಶಿಕ್ಷಕರ ಜೀವನ ಮಕ್ಕಳ ಏಳ್ಗೆಗೆ ಮುಡುಪಾಗಿರಬೇಕು. ಭಾರತದ ಭವಿಷ್ಯ ರೂಪಿಸಿಲು ಸರ್ಕಾರಿ ಶಾಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಇಂದಿನ ಅವಶ್ಯಕತೆಯಾಗಿದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, “2026ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಟಾಪ್ 10 ಜಿಲ್ಲೆಗಳಲ್ಲಿ ಒಂದಾಗಿರಬೇಕು. ಶಿಕ್ಷಕರು ಹಾಗೂ ಇಲಾಖೆ ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ 9 ಜನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಾಗೂ 8 ಜನ ಪ್ರೌಢ ಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಶಿಕ್ಷಕರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರನ್ನು ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ಚರಮೂರ್ತಿಮಠದ ಸಂಪಾದನಾ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕೋಡಿ ಡಿಡಿಪಿಐ ಆರ್ ಎಸ್ ಸೀತಾರಾಮು, ಡಿಡಿಪಿಯು ಪಾಂಡುರಂಗ ಭಂಡಾರಿ, ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ರಾಜೇಶ ಬುರ್ಲಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎನ್ ಜಿ ಪಾಟೀಲ, ಬಿಇಒ ಪ್ರಭಾವತಿ ಪಾಟೀಲ, ಜಿನೇಂದ್ರ ನಿಲಜಗಿ, ಪುರಸಭೆ ಸದಸ್ಯ ರಾಮಾ ಮಾನೆ, ರವಿ ಹಂಪಣ್ಣವರ ಇತರರು ಇದ್ದರು.

Spread the love

About Laxminews 24x7

Check Also

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು

Spread the love ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶ ದರ್ಶನ ಪಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ