Breaking News

ಧರ್ಮಸ್ಥಳ ಪ್ರಕರಣ: ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್

Spread the love

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಯಾವ ಆಧಾರದ ಮೇಲೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಜನಾರ್ದನ ರೆಡ್ಡಿಯವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಮಿಳುನಾಡಿನ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್​ ತಿಳಿಸಿದ್ದಾರೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂಸದನಾಗಿ ನಾನು ಸಾರ್ವಜನಿಕವಾಗಿ ಮತ್ತು ಕಾನೂನಾತ್ಮಕ ಉತ್ತರ ನೀಡಬೇಕಿದೆ: ಸಸಿಕಾಂತ್ ಸೆಂಥಿಲ್

ದೂರು ಸಲ್ಲಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ”ಯಾವುದೋ ವಾಟ್ಸ್ಆ್ಯಪ್ ಫಾರ್ವರ್ಡ್ ಮೆಸೇಜ್ ನೋಡಿಕೊಂಡು ಬಂದು ಧರ್ಮಸ್ಥಳದ ವಿರುದ್ಧದ ಆರೋಪಗಳ ಹಿಂದಿನ ಮಾಸ್ಟರ್ ಮೈಂಡ್, ಸ್ಕ್ರಿಪ್ಟ್ ರೈಟರ್ ನಾನು ಎಂದು ಜನಾರ್ದನ ರೆಡ್ಡಿಯವರು ಆರೋಪಿಸಿದ್ದಾರೆ. ಓರ್ವ ಸಂಸದನಾಗಿ ನಾನು ಇಂತಹ ಬಾಲಿಶವಾದ ಆರೋಪಗಳಿಗೆ ಉತ್ತರಿಸಬೇಕೇ ಎಂದು ಸುಮ್ಮನಾಗಿದ್ದೆ. ಆದರೆ, ಇದು ದಿನಕ್ಕೊಂದು ಸ್ಟೋರಿ ಕ್ರಿಯೇಟ್ ಆಗುತ್ತಿರುವುದರಿಂದ ನಾನು ಪ್ರತಿಕ್ರಿಯಿಸಲೇಬೇಕಿದೆ. ಸಂಸದನಾಗಿ ನಾನು ಸಾರ್ವಜನಿಕವಾಗಿ ಮತ್ತು ಕಾನೂನಾತ್ಮಕ ಉತ್ತರ ನೀಡಬೇಕಿರುವುದರಿಂದ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದೇನೆ” ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ