Breaking News

ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ…..

Spread the love

ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರು: ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ…..
ಇಬ್ಬರು ಕಳ್ಳರನ್ನು ಬಂಧಿಸಿದ ಮೂಡಲಗಿ ಪೊಲೀಸರುಮೂರು ಕಳ್ಳತನ ಪ್ರಕರಣಕ್ಕೆ ಬೇಕಾದ ಆರೋಪಿಗಳು
ಬಂಧಿತರಿಂದ 6 ಲಕ್ಷ ಮೌಲ್ಯದ ಬಂಗಾರದ ಆಭರಣ ವಶಸಿಬ್ಬಂದಿಗಳ ಕಾರ್ಯವನ್ನು ಅಭಿನಂಧಿಸಿದ ಎಸ್ಪಿ ಗುಳೇದ
ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಮೈಮೇಲೆ ಇರುವ ಬಂಗಾರದ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ ಅವರಿಂದ ಆಭರಣಗಳನ್ನು ವಶ ಪಡಿಸಿಕೊಂಡಿರುವ ಘಟನೆ ಜರುಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲಗಿ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವಳ ಬಂಗಾರದ ಬೋರಮಾಳ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಲಗಿ ಪೊಲೀಸರು ತನಿಖೆ
ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಜಿಲ್ಲೆಯ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ತಿಳಿದು ಬಂದಿದೆ.
ಬಂಧಿತ ಕಳ್ಳರಿಂದ ಕಳ್ಳತನ ಮಾಡಿದ 6 ಲಕ್ಷ ಮೌಲ್ಯದ ಬಂಗಾರದ ಆಭರಣಗಳನ್ನು ಪೊಲೀಸರು ವಶ ಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಸಿಬ್ಬಂದಿಗಳ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅಭಿನಂದಿಸಿದ್ದಾರೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ