ವಿಜಯಪುರ, (ಸೆಪ್ಟೆಂಬರ್ 08): ಲವ್ವರ್ (Boyfriend) ಜೊತೆ ಸೇರಿ ಗಂಡನನ್ನೇ (Husband) ಕೊಲೆ (Murder) ಮಾಡಲು ಯತ್ನಿಸಿದ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಹೌದು…ಸುನಂದಾ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ ಗಂಡ ಭೀರಪ್ಪ ಪೂಜಾರಿಯನ್ನು ಕೊಲೆಗೆ ಯತ್ನಿಸಿದ್ದಾಳೆ. ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ನಡೆದಿದೆ. ರಾತ್ರಿ ಮಲಗಿದಾಗ ಪತಿಯ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಭೀರಪ್ಪ ಪೂಜಾರಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಸೆಪ್ಟೆಂಬರ್ 1, 2025ರಂದು ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುನಂದಾ ತನ್ನ ಪ್ರಿಯಕರ ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಸೇರಿ ಬೀರಪ್ಪ ಎದೆಯ ಮೇಲೆ ಕುಳಿತು ಕತ್ತು ಮತ್ತು ಮರ್ಮಾಂಗವನ್ನು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾಳೆ.
ಬೀರಪ್ಪ ಮಾಯಪ್ಪ ಪೂಜಾರಿ, ತಮ್ಮ ಪತ್ನಿ ಸುನಂದಾ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿ ಪಟ್ಟಣದ ಅಕ್ಕಮಹಾದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸುನಂದಾ, ಸಿದ್ದಪ್ಪ ಕ್ಯಾತಕೇರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ. ಈ ಸಂಬಂಧವನ್ನು ಮುಂದುವರಿಸಲು ಬೀರಪ್ಪನನ್ನು ಮುಗಿಸಲು ಸುನಂದಾ ಯೋಜನೆ ರೂಪಿಸಿದ್ದಳು. ಅದರಂತೆ ಸೆಪ್ಟೆಂಬರ್ 1ರಂದು ರಾತ್ರಿ ಮನೆಯಲ್ಲಿ ಭೀರಪ್ಪ ಮಲಗಿದ್ದ ವೇಳೆ ಸುನಂದಾ ತನ್ನ ಪ್ರಿಯಕರನ ಜೊತೆಗೆ ಮತ್ತೊಬ್ಬ ವ್ಯಕ್ತಿಯನ್ನು ಕರೆದು ಕೊಲ್ಲಲು ಪ್ರಯತ್ನಿಸಿದ್ದಾಳೆ.
Laxmi News 24×7