Breaking News

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

Spread the love

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ.

ಇಡಿ ಅಧಿಕಾರಿಗಳು ಸೆ.6ರಂದು ಚಳ್ಳಕೆರೆಯಲ್ಲಿ ಕೆ. ಸಿ. ವೀರೇಂದ್ರ ಹಾಗೂ ಸಂಬಂಧಿಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 24 ಕೋಟಿ ರೂ. ಮೌಲ್ಯದ 24 ಕ್ಯಾರೆಟ್ 21.43 ಕೆ.ಜಿ. ಚಿನ್ನದ ಗಟ್ಟಿ, 10.985 ಕೆ.ಜಿ. ತೂಕದ ಚಿನ್ನ ಲೇಪಿತ 11 ಬೆಳ್ಳಿ ಗಟ್ಟಿಗಳು ಹಾಗೂ 1 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಜತೆಗೆ ಇದುವರೆಗಿನ ದಾಳಿಯಲ್ಲಿ ಆರೋಪಿ ಮತ್ತು ಅವರ ಸಂಬಂಧಿಕರಿಗೆ ಸೇರಿದಂತೆ ಒಟ್ಟು ಸುಮಾರು 100 ಕೋಟಿ ರೂಪಾಯಿಗೂ ಅಧಿಕ ಚಿನ್ನಾಭರಣ, ನಗದು ಹಾಗೂ ಆಸ್ತಿ ಸೇರಿ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಇದಕ್ಕೂ ಮುನ್ನ ಇ.ಡಿ. ಅಧಿಕಾರಿಗಳು ಆರೋಪಿ ಕೆ.ಸಿ. ವೀರೇಂದ್ರ ಅವರನ್ನು 15 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಡೆಯ ನಾಲ್ಕು ದಿನ ಹೆಚ್ಚಿನ ವಿಚಾರಣೆ ವೇಳೆ ಆರೋಪಿ ಕೆ.ಸಿ. ವೀರೇಂದ್ರ ಕಿಂಗ್ 567, ರಾಜಾ 567, ಪ್ಲೇ 567, ಪ್ಲೇವಿನ್ 567 ಇತ್ಯಾದಿ ಹೆಸರಿನಲ್ಲಿ ಹಲವು ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮ ಆನ್‌ಲೈನ್/ಆಫ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳ ಮೂಲಕ ಗಳಿಸಿದ ಹಣವನ್ನು ಬೇರೆಡೆಗೆ ವರ್ಗಾಯಿಸಲು ಹಲವು ಗೇಟ್ ವೇಗಳನ್ನು ಬಳಸಿರುವುದು ಇಡಿ ತನಿಖೆಯಲ್ಲಿ ಬಯಲಾಗಿದೆ.

ಆರೋಪಿ ಕೆ.ಸಿ. ವೀರೇಂದ್ರ, ಅವರ ಕುಟುಂಬ ಸದಸ್ಯರು ಹಾಗೂ ಸಹಚರರು ವಿದೇಶಗಳಿಗೆ ಪ್ರಯಾಣಿಸಲು ಟಿಕೆಟ್ ಖರೀದಿಸಲು ಕೋಟ್ಯಂತರ ರೂ. ವಿನಿಯೋಗಿಸಿದ್ದಾರೆ. ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್‌ಗಳಿಂದ ಬರುವ ಆದಾಯವನ್ನು ನಕಲಿ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ವಿಮಾನ ಟಿಕೆಟ್ ಬುಕ್ ಮಾಡಲು ಬಳಸಿಕೊಂಡಿರುವುದು ಇ.ಡಿ. ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಹೆಚ್ಚಿನ ಮೌಲ್ಯದ ವಹಿವಾಟುಗಳಿಗೆ ಬಳಸಲಾದ ಹಣವನ್ನು ಅಕ್ರಮ ಆನ್‌ಲೈನ್ ಚಟುವಟಿಕೆಗಳಿಗೆ ತಿರುಗಿಸಲಾಗಿದೆ. ಈ ಹಣದ ಮೂಲವನ್ನು ಮರೆಮಾಚಲು ಮಧ್ಯವರ್ತಿಗಳ ಖಾತೆಗಳನ್ನು ಬಳಸಿಕೊಂಡಿರುವುದು ಸಾಕ್ಷಿಗಳಿಂದ ಬಯಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ