Breaking News

ರೋಗಿ ಕುಟುಂಬಸ್ಥರು, ಆಸ್ಪತ್ರೆ ನಡುವೆ ಹಗ್ಗಜಗ್ಗಾಟ; ಸಚಿವ ಸುಧಾಕರ್ ಮಧ್ಯ ಪ್ರವೇಶದ ಬಳಿಕ ಮೃತದೇಹ ಹಸ್ತಾಂತರ

Spread the love

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಹಸ್ತಾಂತರ ವಿಷಯದಲ್ಲಿ ಕಗ್ಗಂಟಾಗಿದ್ದ ಪ್ರಕರಣ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಅವರ ಮಧ್ಯ ಪ್ರವೇಶದಿಂದ ಬಗೆಹರಿದಿದೆ. ರಾಜಸ್ಥಾನ ಮೂಲದ ಭೀಮರಾಮ್‌ ಪಟೇಲ್‌ ಎಂಬ ಅರವತ್ತೆರಡು ವರ್ಷದ ವ್ಯಕ್ತಿ ಮೃತಪಟ್ಟಿದ್ದು ಹೆಚ್ಚುವರಿ ಬಿಲ್‌ ಪಾವತಿ ವಿಷಯದಲ್ಲಿ ಕುಟುಂಬ ಸದಸ್ಯರು ಮತ್ತು ಜಯನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆ ಆಡಳಿತ ಸಿಬ್ಬಂದಿ ನಡುವೆ ಹಗ್ಗಜಗ್ಗಾಟ ನಡೆದಿತ್ತು. ಮಾತ್ರವಲ್ಲ, ನಲವತ್ತು ದಿನಗಳ ಚಿಕಿತ್ಸೆ ಪಡೆದರೂ ಕೊರೋನಾ ಸೋಂಕು ನಿವಾರಣೆ ಆಗಲಿಲ್ಲ, ಆದರೂ ದೊಡ್ಡ ಮೊತ್ತದ ಶುಲ್ಕ ಪಡೆದಿದ್ದಾರೆ ಮತ್ತು ಸೋಂಕು ನಿವಾರಣೆ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿತ್ತು. ಮರಣೋತ್ತರ ವರದಿಯಲ್ಲಿ ಸೋಂಕು ಇದೆ ಎಂದು ಉಲ್ಲೇಖಿಸಲಾಗಿದೆ. ನಲವತ್ತು ದಿನಗಳ ಚಿಕಿತ್ಸೆ ಬಳಿಕವೂ ಸೋಂಕು ಇದೆ ಎಂದರೆ ಹೇಗೆ? ಎಂಬುದು ಕುಟುಂಬಸ್ಥರ ಆರೋಪವಾಗಿತ್ತು.

ಈ ಕಾರಣಗಳಿಂದ ಡಿ. 23 ರಂದು ರೋಗಿ ಬೆಳಗ್ಗೆ ಮೃತಪಟ್ಟಿದ್ದರೂ ಸಂಜೆ ಆದರೂ ಈ ವಿಷಯದಲ್ಲಿ ಪರ-ವಿರೋಧ ಚರ್ಚೆಗಳಿಂದ ಮೃತದೇಹ ಹಸ್ತಾಂತರ ಆಗಿರಲಿಲ್ಲ. ಈ ಸುದ್ದಿ ಅದೇ ದಿನ ಸಂಜೆ ವೇಳೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರಿಗೆ ತಲುಪಿದೆ. ವಿಷಯ ಗೊತ್ತಾಗುತ್ತಿದ್ದಂತೆ ಎಲ್ಲ ಮಾಹಿತಿ ತರಿಸಿಕೊಂಡು ಪರಿಶೀಲಿಸಿದ ಸಚಿವರು, ಆಡಳಿತ ಮಂಡಳಿಯವರನ್ನು ಸಂಪರ್ಕಿಸಿ ಪ್ರಕರಣದ ಬಗ್ಗೆ ವಿಚಾರಿಸಿದ್ದಾರೆ.ಆಸ್ಪತ್ರೆ ಆಡಳಿತ, ತಮ್ಮದೇನೂ ತಪ್ಪಿಲ್ಲ. ರೋಗಿಗೆ ಕೋವಿಡ್‌ ಇರುವುದರಿಂದ ನಿಯಮಾವಳಿಗಳ ಅನ್ವಯ ಬಿಬಿಎಂಪಿ ಮೂಲಕ ದೇಹ ಹಸ್ತಾಂತರ ಮಾಡಬೇಕಿದೆ ಎಂಬ ಮಾಹಿತಿ ನೀಡಿದರಲ್ಲದೇ, ಬಾಕಿ ಇರುವ ಶುಲ್ಕ ಪಾವತಿ ಕುರಿತ ವಿವರ ನೀಡಿದರು. ಅಂತಿಮವಾಗಿ ಸಚಿವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಇನ್ಷೂರೆನ್ಸ್‌ ಕಂಪನಿಯಿಂದ ಪಡೆದ ಹಣ ಮತ್ತು ರೋಗಿ ಪುತ್ರ ಪಟೇಲ್‌ ಮುಂಚಿತವಾಗಿ ಕಟ್ಟಿದ್ದ ಹಣಕ್ಕೆ ಬಿಲ್‌ ಮುಕ್ತಾಯಗೊಳಿಸಿ ದೇಹವನ್ನು ಮೃತರ ಕುಟುಂಬಸ್ಥರಿಗೆ ಡಿ.24ರಂದು ಕೋವಿಡಿ ವಿಧಿ ವಿಧಾನಗಳ ಅನ್ವಯ ಹಸ್ತಾಂತರಿಸಲಾಯಿತು. ಕಟ್ಟಬೇಕು ಎಂದು ತಿಳಿಸಿದ್ದ ಹತ್ತು ಲಕ್ಷದಷ್ಟು ಹಣವನ್ನು ಮನ್ನಾ ಮಾಡಲಾಯಿತು.


Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ