ಬೆಳಗಾವಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಯುವಕನನ್ನು ಪತಿ ಹಾಗೂ ಕುಟುಂಬಸ್ಥರು ಬರ್ಬರವಾಗಿ ಕೊಲೆಗೈದ ಘಟನೆ ಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಗ್ರಾಮದಲ್ಲಿ ನಡೆದಿದೆ.
ಹೊಸ ಕುರಗುಂದ ಗ್ರಾಮದ ನಿವಾಸಿ ದ್ಯಾಮಪ್ಪ ವಣ್ಣೂರ (22) ಹತ್ಯೆಯಾದ ಯುವಕ. ಅದೇ ಗ್ರಾಮದ ಈರಪ್ಪ ನಾಯ್ಕರ್ ಮತ್ತು ಕುಟುಂಬಸ್ಥರಿಂದ ಕೃತ್ಯ ನಡೆದಿದೆ. ಗ್ರಾಮದಲ್ಲಿ ಬುಧವಾರ ಸಂಜೆ ಘಟನೆ ನಡೆದಿದ್ದು, ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ದ್ಯಾಮಪ್ಪ ವಣ್ಣೂರ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಈರಣ್ಣಗೆ ವ್ಯಕ್ತವಾಗಿತ್ತು. ಹೀಗಾಗಿ ಬುಧವಾರ ಪೈಕ್‍ನಲ್ಲಿ ಬರುತ್ತಿದ್ದ ದ್ಯಾಮಪ್ಪನನ್ನು ಅಡ್ಡಗಟ್ಟಿದ ಈರಣ್ಣ ನಾಯ್ಕರ್ ಹಾಗೂ ಆತನ ಕುಟುಂಬಸ್ಥರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ದ್ಯಾಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬೈಲಹೊಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
Laxmi News 24×7