ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ
ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ಧೇಶ
ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ
ವಿದ್ಯಾರ್ಥಿಗಳು ಮತ್ತು ಜನರಿಂದ ಉತ್ತಮ ಪ್ರತಿಕ್ರಿಯೆ
ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶುಕ್ರವಾರದಂದು ಬೆಳಗಾವಿಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಬೆಳಗಾವಿಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 30 ವಿದ್ಯಾರ್ಥಿಗಳು ಮತ್ತು 40 ಹವ್ಯಾಸಿ ಕಲಾವಿದರು ಭಾಗಿಯಾಗಿದ್ಧರು. ಐಎಎಸ್ ಪ್ರೊಬೇಷನರಿ ಅಧಿಕಾರಿ ಅಭಿನವ್ ಜೈನ್ ಅವರು ನೋಡಲ್ ಅಧಿಕಾರಿಗಳಾಗಿ ಉಪಸ್ಥಿತರಿದ್ಧರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕುರಿತು ಪ್ರೋಬೆಷನರಿ ಐಎಎಸ್ ಅಧಿಕಾರಿ ಅಭಿನವ್ ಜೈನ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರು ಹೆಚ್ಚಿನ ಮಾಹಿತಿಯನ್ನು ನೀಡಿದರು.
ಪ್ರಜಾಪ್ರಭುತ್ವದ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ಧೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಲ್ಲಿ ಗೆದ್ದವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವಕಾಶ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಪತ್ರಾಂಕಿತ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ ಹೊಸಮನಿ ಹೇಳಿದರು.
ಈಗಾಗಲೇ ತಾಲೂಕಾಮಟ್ಟದಲ್ಲಿ ಸ್ಪರ್ಧೆಗಳು ನಡೆದಿದ್ದು, ಇಂದು ಜಿಲ್ಲಾಮಟ್ಟದಲ್ಲಿ ಸ್ಪರ್ಧೆ ನಡೆಯುತ್ತಿದೆ. 4 ವಿಷಯಗಳನ್ನು ನೀಡಲಾಗಿದೆ ಎಂ ಡಿ ಆರ್. ಎಸ್ ಎಸ್ಪಿ ಬಹುರೂಪಿ ಹೇಳಿದರು. ಬೈಟ್
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.