ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಇಂದು ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ.
ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಸೇವೆಗೆ ಬದ್ಧತೆಯಿಂದ ಮತ್ತು ಸ್ವತಂತ್ರವಾಗಿ ಶ್ರಮಿಸುವ ಈ ಪೆನಲ್‌ಗೆ ಎಲ್ಲರೂ ಒಗ್ಗಟ್ಟಿನಿಂದ ಬೆಂಬಲ ನೀಡುವಂತೆ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಕ, ಮುಖಂಡರಾದ ಶ್ರೀ ಬಸವರಾಜ ಮಟಗಾರ ಹಾಗೂ ಗ್ರಾಮದ ಮುಖಂಡರು ಮತ್ತು ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.