Breaking News

ರಾಜ್ಯ ಸರಕಾರ ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ:ಮಹಾಂತೇಶ ಕವಟಗಿಮಠ

Spread the love

ಕ್ರೈಸ್ತ ಪದ ಸೇರ್ಪಡೆಗೆ ವಿರೋಧ
ಚಿಕ್ಕೋಡಿ: ರಾಜ್ಯ ಸರಕಾರ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಡುತ್ತಿರುವ ಜಾತಿಗಣತಿಯಲ್ಲಿ ಹಿಂದು ಜಾತಿಗಳ ಮುಂದೆ ಕ್ರೈಸ್ತರು ಎಂಬ ಪದ ಸೇರಿಸುವ ಮೂಲಕ
ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೋಡಿಯ ಹಾಲಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಬಳಕೆ ಮಾಡುವ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ.
ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ಪಡೆದುಕೊಂಡು ಜನರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.
ಇದರ ವಿರುದ್ಧ ರಾಜ್ಯ ವ್ಯಾಪಿ ಹೋರಾಟ ಮಾಡಲಾಗುವುದು. ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ರಾಜ್ಯ ಸರಕಾರ ಧರ್ಮ-ಧರ್ಮಗಳು ಹಾಗೂ ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಕಾರ್ಯ ಮಾಡುತ್ತಿದೆ ಎಂದರು.
ಎಲ್ಲಾ ಜಾತಿಗಳ ಮುಖಂಡರ ಸಭೆ ನಡೆಸಿ ಸರಕಾರದ ಗಮನಕ್ಕೆ ತರಲಾಗುವುದು. ಇದರಲ್ಲಿ ಎಲ್ಲಾ ಜಾತಿಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅಮೃತ ಕುಲಕರ್ಣಿ, ಮಹೇಶ ಭಾತೆ, ಎನ್.ಎಸ್. ವಂಟಮುತ್ತೆ, ಪವನಕುಮಾರ ಮಹಾಜನ, ಸಂಜಯ ಪಾಟೀಲ, ಸಿದ್ದಾರ್ಥ ಗಾಯಗೋಳ, ಲಕ್ಷ್ಮಣ ಡಂಗೇರ ಭಾಗವಹಿಸಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ