ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ*
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ದ್ರಾಕ್ಷ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ರಾಜ್ಯದಲ್ಲೇ ಅತಿ ಹೆಚ್ಚು ದ್ರಾಕ್ಷ ಬೆಳೆಯುವ ವಿಜಯಪುರ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಿಕೊಡಬೇಕು ಹಾಗೂ 2024-25ನೇ ಸಾಲಿನ ದ್ರಾಕ್ಷ ವಿಮೆ ಹಣವನ್ನು
ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು. ಇನ್ನೂ ವಿಜಯಪುರ ಜಿಲ್ಲೆಯ ಸಾವಿರಾರು ದ್ರಾಕ್ಷ ಬೆಳೆಗಾರರು 2024-25ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ್ದರೂ, ಇಲ್ಲಿಯವರೆಗೆ ವಿಮೆ ಹಣವನ್ನು ಅಧಿಕಾರಿಗಳು ನೀಡಿಲ್ಲ.
ಕೂಡಲೇ ರೈತರಿಗೆ ಬೆಳೆ ಹಾನಿ ಪರಿಹಾರದ ಹಣವನ್ನು ವಿತರಿಸಬೇಕು, ಇಲ್ಲವಾದಲ್ಲಿ ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ವಿಜಯಪುರದಲ್ಲಿ ರೈತ ಸಂಘಟನೆಯ ಮುಖಂಡ ಸಂಗಮೇಶ್ ಸಾಗರ್ ಆಗ್ರಹಿಸಿದರು.
Laxmi News 24×7