Breaking News

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ

Spread the love

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ
ಚಿಕ್ಕೋಡಿ:ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ಮುರಾರ್ಜಿ ದೇಸಾಯಿ ಹಾಸ್ಟೇಲ್ ನ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತ್ತು ಮಾಡಲಾಗಿದೆ.ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ತೊಂದರೆ ಕಾಣಿಸಿತು.ವಿಷಾಹಾರ ಸೇವಿಸಿ 119 ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದರು.53 ಜನ ಮಕ್ಕಳಿಗೆ ಇನ್ನು ಚಿಕಿತ್ಸೆ ಮುಂದುವರೆದಿದೆ.
40 ಮಕ್ಕಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.19 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ರೀತಿಯ ಸ್ಯಾಂಪಲ್ಸ್ ಲ್ಯಾಬ್ ಗೆ ಕಳುಹಿಸಲಾಗಿದೆ.
ಇನ್ನೂ ಹೆಚ್ಚಿನ ವಿಚಾರಣೆ ನಂತರ ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ.ಹಾಸ್ಟೇಲ್ ಮೂಲಭೂತ ಸೌಕರ್ಯಗಳ ಬಗ್ಗೆ ಕೂಡ ಪರಿಶೀಲನೆ ಮಾಡುತ್ತೇವೆ ಎಂದರು.
ಈ‌ ಸಂಧರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ! ಎಸ್.ಎಸ್.ಗಡೇದ,ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ,ಎಸಿ ಸುಭಾಷ ಸಂಪಗಾವಿ,ತಹಶೀಲ್ದಾರ ರಾಜೇಶ ಬುರ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ