Breaking News

ರಾಜವಂಶಸ್ಥರಿಂದ ನವರಾತ್ರಿ ಧಾರ್ಮಿಕ ಕಾರ್ಯ: 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರ ನಿರ್ಬಂಧ

Spread the love

ಮೈಸೂರು: ನವರಾತ್ರಿ ಹಿನ್ನೆಲೆ ಮೈಸೂರು ಅರಮನೆಯ ಒಳಗಡೆ ರಾಜ ವಂಶಸ್ಥರು ಧಾರ್ಮಿಕ ಕಾರ್ಯಗಳನ್ನು ಮಾಡುತ್ತಾರೆ. ಈ ನಿಮಿತ್ತ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಸೆ.16ರ ಬೆಳಗ್ಗೆ 8.30 ರಿಂದ 1 ರವರೆಗೆ ಸಿಂಹಾಸನ ಜೋಡಣೆ, ಸೆ.22 ರಂದು ಬೆಳಗ್ಗೆಯಿಂದ 2 ಗಂಟೆಯವರೆಗೆ ಖಾಸಗಿ ದರ್ಬಾರ್ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ನಿಮಿತ್ತ, ಅ. 1 ಆಯುಧ ಪೂಜೆ, ಅ. 2 ವಿಜಯದಶಮಿ ದಿನ ಪೂರ್ತಿ ಅರಮನೆಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ಅ. 31 ರಂದು ಬೆಳಗ್ಗೆಯಿಂದ 12 ಗಂಟೆಯವರೆಗೆ ಸಿಂಹಾಸನ ವಿಸರ್ಜನೆ ನಿಮಿತ್ತ ಈ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.

ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳು ಭರದಿಂದ ಸಾಗಿದ್ದು, ಈ ಮಧ್ಯೆ ಅರಮನೆಯ ರಾಜವಂಶಸ್ಥರು ನಡೆಸುವ ಶರನ್ನವರಾತ್ರಿಯ ಸಾಂಪ್ರದಾಯಿಕ ದಸರಾ ಪೂಜೆಗಳಿಗೂ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಅರಮನೆಗೆ ಪ್ರವಾಸಿಗರಿಗೆ ನಿರ್ಬಂಧದ ಜೊತೆಗೆ ಸೆ.15 ರಿಂದ ಅ.12 ರವರೆಗೆ ಅರಮನೆಯಲ್ಲಿ ನಡೆಯುವ ಧ್ವನಿ ಬೆಳಕು ಕಾರ್ಯಕ್ರಮ ಕೂಡ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

ಸೆ.16 ರಂದು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್​ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೆ.16 ರ ಬೆಳಗ್ಗೆ 8.30 ರಿಂದ 1 ಗಂಟೆಯವರೆಗೆ ಅರಮನೆಗೆ ಪ್ರವಾಸಿಗರ ನಿರ್ಬಂಧ ಇರಲಿದ್ದು, 1 ಗಂಟೆಯ ನಂತರ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಅರಮನೆಯ ವೀಕ್ಷಣೆಗೆ ಅವಕಾಶವಿರುತ್ತದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ