ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.
ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರೊಂದಿಗೆ ಸಭೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ನಡೆಸಿರುವ ಕುರಿತು ಮಾಹಿತಿ ತಿಳಿದು ಬಂದಿದೆ.
ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ಕ್ರಮ ಕೈಗೊಳ್ಳಲು ತಿಳಿಸಲಾಗುವುದು ಎಂದರು.
ಇನ್ನೂ ಬೆಳೆ ಹಾನಿಯ ಕುರಿತು ಕೃಷಿ ಇಲಾಖೆಯಿಂದ ಸಮೀಕ್ಷೆ ನಡೆಸಲಾಗುವುದು. ವರದಿ ಬಂದ ಬಳಿಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಬೆಳೆ ಹಾನಿ ಪರಿಹಾರ ಕೊಡಲಾಗುವುದು ಎಂದರು.