ಬೆಂಗಳೂರು/ಕೊಪ್ಪಳ, (ಸೆಪ್ಟೆಂಬರ್ 17): ದಲಿತ ಮಹಿಳೆಯ (Dalit Woman) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ((Basanagouda Patil Yatnal)) ಹೈಕೋರ್ಟ್ (Karnataka High Court) ಬಿಗ್ ರಿಲೀಫ್ ನೀಡಿದೆ.
ಅಟ್ರಾಸಿಟಿ ಕಾಯ್ದೆಯಡಿ ಕೊಪ್ಪಳದಲ್ಲಿ (Koppal) ದಾಖಲಾಗಿರುವ FIR ಪ್ರಶ್ನಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬಸನಗೌ ಪಾಟೀಲ್ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಅಲ್ಲದೇ ಪೊಲೀಸರ ತನಿಖೆಗೆ ಸಹಕರಿಸಲು ಯತ್ನಾಳ್ಗೆ ಸೂಚಿಸಿದೆ.
ಯಾವುದೇ ಪಕ್ಷದವರಿರಲಿ ಒಂದು ಸಮುದಾಯ ಓಲೈಸಿದರೆ ಹೀಗಾಗುತ್ತದೆ. ಭಾರತೀಯರನ್ನು ಭಾರತೀಯರಂತೆಯೇ ನೋಡಿದರೆ ಈ ಸಮಸ್ಯೆ ಇರುವುದಿಲ್ಲ ಎಂದು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ AQQAqaqaಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.ಸನಾತನ ಧರ್ಮದ ಹೆಣ್ಣುಮಕ್ಕಳಿಗೆ ಚಾಮುಂಡಿ ತಾಯಿಗೆ ಪೂಜೆ ಹಕ್ಕಿದೆ.
ದಲಿತ ಹೆಣ್ಣುಮಕ್ಕಳರಲಿ ಯಾವುದೇ ಸಮಾಜದವರಿರಲಿ ಹಕ್ಕಿದೆ ಎಂದು ಯತ್ನಾಳ್ ಅವರು ಹೇಳಿದ್ದಾರೆ. ಆದ್ರೆ, ಅವರ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ್ದಾರೆ ಎಂದು ಯತ್ನಾಳ್ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿದರು. ಸಾಲದಕ್ಕೆ ಯತ್ನಾಳ್ ಹೇಳಿಕೆಯನ್ನು ಮೊಬೈಲ್ನಲ್ಲಿ ಜಡ್ಜ್ ಗೆ ಕೇಳಿಸಿರು.
ಇದನ್ನು ಪರಿಗಣಿಸಿದ ಹೈಕೋರ್ಟ್, ಶಾಸಕ ಯತ್ನಾಳ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದ್ದು, ಯಾವುದೇ ಪಕ್ಷದವರಿರಲಿ ಒಂದು ಸಮುದಾಯ ಓಲೈಸಿದರೆ ಹೀಗಾಗುತ್ತದೆ. ಭಾರತೀಯರನ್ನು ಭಾರತೀಯರಂತೆಯೇ ನೋಡಿದರೆ ಈ ಸಮಸ್ಯೆ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
Laxmi News 24×7