ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.
– ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಧಾರವಾಡ ವಾರ್ಡ ನಂಬರ 10ರ ಶಿವಶಕ್ತಿ ನಗರದ ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ 26 ಕುಟುಂಬಗಳು ಸೇರಿ ಅಂಜನೇಯ ನಗರದ 15 ಫಲಾನುಭವಿಗಳ ಕುಟುಂಬಕ್ಕೆ ವಿಧಾನ ಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಹಕ್ಕು ಪತ್ರ ವಿತರಣೆ ಮಾಡಿದರು.
ಹುಬ್ಬಳ್ಳಿಯ ಗೋಕುಲ್ ಗಾರ್ಡನ್ ಶಾಸಕರ ನಿವಾಸದಲ್ಲಿ ವಿಪಕ್ಷ ಉಪನಾಯಕರಾದ ಅರವಿಂದ ಬೆಲ್ಲದ ತಮ್ಮ ಕ್ಷೇತ್ರದ ಒಟ್ಟು 41 ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮೂಲಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದರು.
ಧಾರವಾಡ 10ನೇ ವಾರ್ಡಿನ್ ಶಿವಶಿಕ್ತಿ ನಗರದ 26 ಹಾಗೂ ಅಂಜನೇಯ ನಗರದ 15 ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿದರು. ಇನ್ನೂ ಹಕ್ಕು ಪತ್ರ ಪಡೆದ ಕುಟುಂಬ ಸದಸ್ಯರ ಮುಖದಲ್ಲಿ ಸಂತಸ ಭಾವನೆ ಮೂಡಿದ ಕಂಡ ಬಂದಿತ್ತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಮಂಜುನಾಥ ಮಲ್ಲಿಗವಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಗರಗ, ಪಾಲಿಕೆ ಸದಸ್ಯರಾದ ಚಂದ್ರಕಲಾ ಕೊಟಬಾಗಿ ಸೇರಿ ಅನೇಕರು ಉಪಸ್ಥಿತರಿದ್ದರು.