Breaking News

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*

Spread the love

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಪಿ ಐ ಗುರುಶಾಂತ ಗೌಡ ದಾಶ್ಯಾಳ ಮಾತನಾಡಿ ಸಮಾಜದಲ್ಲಿ ಶಾಂತತೆ ಇರಬೇಕಾದರೆ ಜನರ ಸಹಕಾರ ಬೇಕು ಅಂತ ಹೇಳಿದರು.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಣ್ಣ- ಪುಟ್ಟ ಪ್ರಕರಣಗಳನ್ನು ಹೊರತು ಪಡಿಸಿ ಈ ವರ್ಷ ಯಾವುದೇ ಜಾತಿ ನಿಂದನೆ ಪ್ರಕರಣಗಳು ದಾಖಲಾಗಿಲ್ಲ. ಇದಕ್ಕೆಲ್ಲ ನಿಮ್ಮೆಲ್ಲರ ಸಹಕಾರವೇ ಕಾರಣ.
ಪ್ರತಿಯೊಬ್ಬರು ಮನೆಯ ಸುತ್ತ ಮುತ್ತ ಸಿಸಿ ಟಿವಿ ಅಳವಡಿಸಿಕೊಳ್ಳಬೇಕು. ಇದರಿಂದ ಕಳ್ಳತನ ಪ್ರಕರಣಗಳನ್ನ ತಡೆಯಬಹುದಾಗಿದೆ ಎಂದರು.
ಇದೇ ಸಮಯದಲ್ಲಿ ಡಿಎಸ್ ಎಸ್ ಮುಖಂಡ ಅಶೋಕ ಚಲವಾದಿ ಅರವಿಂದ್ ಸಾಲವಾಡಗಿ ಗುರು ಗುಡಿಮನಿ ಪರಶುರಾಮ್ ದಿಂಡವಾರ ಸಂಜೀವ್ ಕಲ್ಯಾಣಿ ಬಸಗೊಂ ಡಪ್ಪ ಹಾದಿಮನಿ ಅನೇಕ ದಲಿತ ಸಮಾಜದ ಮುಖಂಡರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ