Breaking News

ನೂತನ ಹೆಲಿಕಾಪ್ಟರ್​ ಖರೀದಿಸಿದ ಸಚಿವ ಸತೀಶ್‌ ಜಾರಕಿಹೊಳಿ?

Spread the love

ಬೆಳಗಾವಿ: ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ.
ಹೌದು…. ಇಂದು ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ತಮ್ಮ ಪೇಸ್ ಬುಕ್‌ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
ಸಚಿವ ಸತೀಶ್‌ ಜಾರಕಿಹೊಳಿ ಅವರು ಉತ್ತರಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್‌ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕೂಡಾ ಪಾತ್ರರಾಗಿದ್ದಾರೆ.
ಇನ್ನು 2 ತಿಂಗಳುಗಳಲ್ಲಿ ಹಾರಾಡಲಿದೆ ಸಚಿವರ ಹೆಲಿಕಾಪ್ಟರ್‌: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಮ್ಮದೆಯಾದಂತಹ ಅಭಿಮಾನ ಬಳಗವನ್ನು ಕೂಡಾ ಹೊಂದಿದ್ದಾರೆ.
ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಅಪ್ಪಟ ಶಿಷ್ಯನಾಗಿದ್ದು, ರಾಜ್ಯದಲ್ಲಿ ಅಹಿಂದಾ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ದಿನದ 24 ಗಂಟೆಗಳಲ್ಲಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಿರುವ ಸಚಿವರು, ರಾಜ್ಯದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಈ ನೂತನ ಹೆಲಿಕಾಪ್ಟರ್‌ ಪರಿಶೀಲಿಸುತ್ತಿರುವ ಸಚಿವರ ವಿಡಿಯೋಗಳು ಈಗ ಸಾಮಾಜೀಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.
ಹೆಲಿಕಾಪ್ಟರ್​ನ ವಿಶೇಷತೆಗಳೇನು: ಎಲ್ಲಾ ಇತ್ತೀಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಅತ್ಯಾಧುನಿಕ ಡಬಲ್‌ ಇಂಜಿನ್‌ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ ಅನ್ನು ಸಾಗಿಸುವ ವ್ಯವಸ್ಥೆ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ.
ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ, ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೆ ಸುಧಾರಿತ ವೈರ್‌ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.
ಇಂದು ನೂತನ ಹೆಲಿಕಾಪ್ಟರ್‌ ಪರಿಶೀಲಿಸಿದ ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನಮಣ್ಣರ, ಅಲಿ ಗೊರವನಕೋಲ್ ಸೇರಿದಂತೆ ಇತತರು ಇದ್ದರು.

Spread the love

About Laxminews 24x7

Check Also

ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಭೇಟಿ

Spread the loveಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ