Breaking News

ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!!

Spread the love

ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!!
ರೋಗಿಗಳು ಜಿಲ್ಲಾಸ್ಪತ್ರೆಗೆ ಶಿಫ್ಟ್…
ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬಾಗಲಕೋಟೆ ನಗರದ 50 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಳಗ್ಗೆ ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ದೃಢಪಟ್ಟಿದೆ. ಯಾವುದೇ ದೊಡ್ಡ ಅನಾಹುತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿ ಆಕ್ಸಿಜನ್ ಗ್ಯಾಸ್ ಅನ್ನು ಹೊರ ಹಾಕಿದ್ದಾರೆ.
ಅಪಾಯದ ಮುನ್ಸೂಚನೆ ಅರಿತ ಆಸ್ಪತ್ರೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ 12 ರೋಗಿಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೇ ರೋಗಿಗಳಿಗೆ ತೊಂದರೆಯಾಗಿಲ್ಲ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ರಾಜೇಂದ್ರ ಕೆ.ವಿ. ಮತ್ತು ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ