Breaking News

21 ದಿನಗಳ ದಸರಾ ದೀಪಾಲಂಕಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ: ಸೊಬಗನ್ನು ಕಣ್ತುಂಬಿಕೊಳ್ಳಲು ಕರೆ

Spread the love

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್‌ ಅವರು ಚಾಲನೆ ನೀಡಿದರು.

ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು ಆಕರ್ಷಣೀಯವಾಗಿ ಈ ಬಾರಿಯ ದೀಪಾಲಂಕಾರ ಕಂಗೊಳಿಸಲಿದೆ‌.‌ ಮಾನ್ಯ ಮುಖ್ಯಮಂತ್ರಿಯವರು ಸಹ ಹೆಚ್ಚು ಆಕರ್ಷಕ ದೀಪಾಲಂಕಾರ ಮಾಡುವಂತೆ ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ಎಲ್ಲರೂ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಮೂಲಕ ದಸರೆಯನ್ನು ಆನಂದಿಸಬಹುದಾಗಿದ್ದು, ಇಂದಿನಿಂದ‌ 21 ದಿನಗಳ ಕಾಲ ಸ್ಥಳೀಯರು ಹಾಗೂ ಪ್ರವಾಸಿಗರು ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ‌” ಎಂದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ