Breaking News

ಕರ್ತವ್ಯ ಲೋಪ, ಹಣಕ್ಕೆ ಬೇಡಿಕೆ ಆರೋಪ: ಇಬ್ಬರು ಇನ್ಸ್‌ಪೆಕ್ಟರ್ ಸಹಿತ ಐವರು ಸಿಬ್ಬಂದಿ ಅಮಾನತು

Spread the love

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಹಿತ ಐವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.

ಪ್ರತ್ಯೇಕ ಪ್ರಕರಣಗಳಲ್ಲಿ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಹಾಗೂ ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಸೇರಿದಂತೆ ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಚಿನ್ನದ ಉದ್ಯಮಿಯೊಬ್ಬರಿಂದ 10 ಲಕ್ಷ ರೂಪಾಯಿ ವಸೂಲಿಗೆ ಯತ್ನಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲಸೂರು ಗೇಟ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ, ಓರ್ವ ಎಎಸ್ಐ ಸೇರಿದಂತೆ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಅವಧಿಗೂ ಮೀರಿ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡಲು ಅವಕಾಶ ನೀಡಿದ ಆರೋಪದಡಿ ಕೋರಮಂಗಲ ಠಾಣೆಯ ಇನ್ಸ್‌ಪೆಕ್ಟರ್ ಲೂಯಿರಾಮ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ. ಇತ್ತೀಚೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಕೈಗೊಂಡಾಗ ಅವಧಿ ಅಂತ್ಯವಾದ ನಂತರವೂ ಪಬ್, ಬಾರ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಕಂಡು ಬಂದಿತ್ತು.

ಆಗ್ನೇಯ ವಿಭಾಗ ಹಾಗೂ ಕೇಂದ್ರ ವಿಭಾಗದ ಡಿಸಿಪಿಯವರ ಪ್ರಾಥಮಿಕ ತನಿಖಾ ವರದಿ ಆಧರಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.


Spread the love

About Laxminews 24x7

Check Also

ವರುಣನ ಆರ್ಭಟಕ್ಕೆ ಕಲಬುರಗಿಯಲ್ಲಿ ಅವಾಂತರ ಸೃಷ್ಟಿ

Spread the love ಕಲಬುರಗಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಲಬುರಗಿ ಜಿಲ್ಲೆ ಅಕ್ಷರಶಃ ತತ್ತರಿಸಿದೆ. ಮಳೆ ಹೊಡೆತಕ್ಕೆ ತೊಗರಿನಾಡಿನ ರೈತರು ಕಷ್ಟುಪಟ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ