Breaking News

2025ರ ಅಂತ್ಯದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸ ನಿರ್ಬಂಧಿಸಿ ಸರ್ಕಾರ ಆದೇಶ

Spread the love

ಬೆಂಗಳೂರು: 2025ರ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅಧಿಕಾರಿಗಳ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಬಂಧಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ.

2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು.

ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ ಮಾತ್ರ ಹಾಲಿ ಪ್ರವಾಸದ ಪ್ರಸ್ತಾವನೆಗೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುವುದೆಂದು ಆದೇಶದಲ್ಲಿ ಸೂಚಿಸಲಾಗಿದೆ.

ಈ ವರ್ಷ 2025ನೇ ಸಾಲಿನ ಅಂತ್ಯದವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕೃತ ವಿದೇಶ ಪ್ರವಾಸಗಳನ್ನು ನಿರ್ಬಂಧಿಸಲಾಗಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ನೋಡುವುದಾದರೆ, ಸಮೀಕ್ಷೆ ಇಂದು 2ನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಸಾಕಷ್ಚು ದೋಷಗಳಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ.


Spread the love

About Laxminews 24x7

Check Also

ಎರಡನೇ ದಿನವೂ ತಾಂತ್ರಿಕ ದೋಷ, ಆಮೆಗತಿ; ಸುಮಾರು 71,004 ಜನರ ಸಮೀಕ್ಷೆ ಪೂರ್ಣ

Spread the loveಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭವಾಗಿ ಎರಡು ದಿನವಾಗಿದ್ದು, ಇಂದು(ಮಂಗಳವಾರ) ಸಂಜೆ 6 ಗಂಟೆವರೆಗೆ ಕೇವಲ 71,004 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ