ಬೆಂಗಳೂರು,ಡಿ.27- ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆ ತಂದೊಡ್ಡಿದೆ. ಈ ಸಂಬಂಧ ಹಲವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ದಾಖಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಭ್ಯರ್ಥಿಗಳು ಎಲ್ಲಾ ಪಕ್ಷಗಳೊಂದಿಗೆ ಗುರುತಿಸಿಕೊಂಡಂತೆ ಕಂಡುಬರುತ್ತಿದೆ. ತಮ್ಮ ಗೆಲುವಿಗಾಗಿ ಮತದಾರರನ್ನು ಸೆಳೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಫೋಟೋಗಳನ್ನು ಹಾಕಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.
Laxmi News 24×7