Home / ರಾಜ್ಯ / ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭ

ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭ

Spread the love

ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ವಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭವಾಗಲಿದ್ದು, 6 ರಿಂದ 9ನೆ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ.

ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಕ್ಕಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಎಲ್ಲಾ ಶಾಲಾ ಕಟ್ಟಡ, ಶೌಚಾಲಯ, ಶಾಲಾ ಆವರಣಗಳನ್ನು ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಹೇಳಿದರು.

ತರಗತಿಗೆ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗದಿದ್ದ ಪಕ್ಷದಲ್ಲಿ ಪರ್ಯಾಯವಾಗಿ ಆನ್‍ಲೈನ್ ತರಗತಿಯಲ್ಲಿಯೂ ಪಾಠ ಕೇಳಬಹುದಾಗಿದೆ. ಶಾಲೆಗೆ ಬರುವ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕುಡಿಯುವ ನೀರನ್ನು ಮನೆಯಿಂದಲೇ ತರಬೇಕು. ಶಾಲೆಯಲ್ಲಿ ಬಿಸಿಯೂಟ ನೀಡುವುದಿಲ್ಲ. ಬದಲಿಗೆ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಮನೆಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ತರಗತಿಯಲ್ಲಿ 15 ವಿದ್ಯಾರ್ಥಿಗಳಂತೆ ತಂಡ ರಚಿಸಲು ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ತಿಳಿಸಲಾಗಿದೆ. 10ನೆ ತರಗತಿಯ ಈ ವರ್ಷದ ಸಾಲಿನಲ್ಲಿ 19 ಸಾವಿರ ವಿದ್ಯಾರ್ಥಿಗಳಿದ್ದಾರೆ. ಕೋವಿಡ್-19 ನಿಯಮದನ್ವಯ ಅಂತರ ಕಾಯ್ದುಕೊಂಡು ಒಂದು ತಂಡಕ್ಕೆ ಪ್ರಥಮ ಭಾಷೆ ಬೋಧನೆ ಮಾಡಿದಲ್ಲಿ ಅದೇ ಸಮಯದಲ್ಲಿ ಮತ್ತೊಂದು ತಂಡಕ್ಕೆ ದ್ವಿತೀಯ ಭಾಷೆ ಬೋಧಿಸಲಾಗುತ್ತದೆ. ರೊಟೇಷನ್ ಆಧಾರದಲ್ಲಿ ಎಲ್ಲಾ ತಂಡಗಳಿಗೂ ಬೋಧನಾ ಪ್ರಕ್ರಿಯೆ ನಡೆಸಲಾಗುತ್ತದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ