ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಯುವಕರುಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ
ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆಯಾದರು.
ಹುಕ್ಕೇರಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ
ಭರ್ಜರಿ ರಾಜಕೀಯ ಬೆಳವಣಿಗೆ ನಡೆದಿದೆ. ಯವಕರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದರು.
ಈ ಸೇರ್ಪಡೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ವಾಗತ ಕೋರಿದ್ದು, “ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನರು ತಾವಾಗಿಯೇ ನಮ್ಮೊಂದಿಗೆ ಬರುತ್ತಿದ್ದಾರೆ. ಎಂದು ಹೇಳಿದರು.
ಸಮಾರಂಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಹಳೆಯ ಕಾರ್ಯಕರ್ತರು ಭಾಗವಹಿಸಿದ್ದರು.